More

    ಪರಿಸರ ಸಂರಕ್ಷಣೆ ಅತ್ಯಗತ್ಯ

    ಚಿಕ್ಕೋಡಿ: ಪರಿಸರವನ್ನು ಪ್ರತಿಯೊಬ್ಬರೂ ಉಳಿಸಿ, ಬೆಳೆಸಬೇಕಾಗಿದೆ. ಪರಿಸರ ಸಂರಕ್ಷಿಸಿದರೆ ಮಾತ್ರ ಮನುಕುಲ ಉಳಿಯಲಿದೆ ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

    ಶನಿವಾರ ಪಟ್ಟಣದ ಹೊರವಲಯದ ಟ್ರೀ ಪಾರ್ಕ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯಿಂದ ೇವರ್ ಬ್ಲಾಕ್ ಅಳವಡಿಕೆ ಹಾಗೂ ಸಸಿ ನೆಡುವ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.

    ಕರೊನಾದಿಂದ ವಿಶ್ವ ನಲುಗಿ ಹೋಗಿದ್ದು, ಬಹಳಷ್ಟು ಸಮಸ್ಯೆಗಳು ಎದುರಾಗಿವೆ. ಕರೊನಾ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದ್ದಾರೆ. ಇಂತಹ ಸಂಕಷ್ಟದ ದಿನಗಳಲ್ಲಿ ನಾವೆಲ್ಲ ಗಿಡಗಳನ್ನು ಬೆಳಸುವ ಮೂಲಕ ಪರಸರ ಸಮತೋಲನ ಕಾಯ್ದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು. ಲಾಕ್‌ಡೌನ್ ಕೇವಲ ಕಾಟಾಚಾರವಾಗಬಾರದು. ಜನರು ದೈಹಿಕ ಅಂತರ ಕಾಯ್ದುಕೊಂಡು ಕರೊನಾ ಕಟ್ಟಿಹಾಕಲು ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿದೆ. ಕರೊನಾ ಸೋಂಕಿತರು ಯಾವುದೇ ಕಾರಣಕ್ಕೂ ಭಯಗೊಳ್ಳಬಾರದು. ಲಕ್ಷಣಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಅದನ್ನು ತಡೆಗಟ್ಟಲು ಸಾಧ್ಯ ಎಂದರು. ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಶ್ರೀ ಸಂಪಾದನಾ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

    ಕ.ರಾ.ಸ.ಮಹಾಮಂಡಳದ ಉಪಾಧ್ಯಕ್ಷ ಜಗದೀಶ ಕವಟಗಿಮಠ, ಬಸವ ಪ್ರಸಾದ ಜೊಲ್ಲೆ, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ, ಪುರಸಭೆ ಮುಖ್ಯಾಧಿಕಾರಿ ಡಾ.ಸುಂದರ ರೋಗಿ, ಆರ್‌ಎ್ಒ ಉಮೇಶ ಪ್ರಧಾನಿ, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಸೆಲ್ವರಾಜ ನಾಯ್ಕರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಆದಂ ಗಣೇಶವಾಡಿ, ವಿಶ್ವನಾಥ ಕಮಗೌಡ, ಸಂತೋಷ ಜೋಗಳೆ, ಸೋಮನಾಥ ಗವನಾಳೆ, ಸಿದ್ದಪ್ಪ ಡಂಗೇರ, ನಾಗರಾಜ ಮೇದಾರ, ದಾನಪ್ಪ ಕೋಟಬಾಗಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts