More

    ಪರಿಸರ ಸ್ವಚ್ಛತೆಯಿಂದ ಆರೋಗ್ಯ ಭಾಗ್ಯ

    ಶಿರಹಟ್ಟಿ: ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹೀಗಾಗಿ ಮನೆಯ ಸುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿಕೊಂಡಲ್ಲಿ ಮಾತ್ರ ಆರೋಗ್ಯವಂತರಾಗಿ ಬಾಳಲು ಸಾಧ್ಯ ಎಂದು ಬೆಳ್ಳಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಶ್ಮಿ ಪಾಟೀಲ ಹೇಳಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ‘ಮಹಾಮಾರಿ ಕರೊನಾ ಹಳ್ಳಿ ಹಳ್ಳಿಗೂ ಆವರಿಸುತ್ತಿರುವುದು ಆತಂಕದ ಸಂಗತಿ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಪರಸ್ಪರ ಅಂತರ ಕಾಯ್ದುಕೊಂಡಾಗ ಸೋಂಕಿನಿಂದ ದೂರವಿರಲು ಸಾಧ್ಯ. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು ಅವರ ಸಲಹೆ, ಸೂಚನೆ ಪಾಲಿಸಿದರೆ ಆರೋಗ್ಯ ಭಾಗ್ಯ ಪಡೆಯಲು ಸಾಧ್ಯ’ ಎಂದರು.

    ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಎಸ್.ಸಿ. ತೇಗೂರ ಮಾತನಾಡಿ, ಅನಾಫೆಲಿಸ್ ಹೆಣ್ಣು ಸೊಳ್ಳೆಯಿಂದ ಮಲೇರಿಯಾ ಜ್ವರ ಹರಡುತ್ತದೆ. ಹೀಗಾಗಿ ಹೂವಿನ ಕುಂಡ, ಮನೆಯ ಸುತ್ತ ತ್ಯಾಜ್ಯವಸ್ತುಗಳ ಸಂಗ್ರಹವಾಗದಂತೆ ಹಾಗೂ ನೀರು ಸಂಗ್ರಹಣಾ ಸ್ಥಳಗಳಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

    ಗ್ರಾಪಂ ಅಧ್ಯಕ್ಷ ರಮೇಶ ನಿರ್ವಾಣಿಶೆಟ್ಟರ್, ಸದಸ್ಯ ಸಂಜೀವರಡ್ಡಿ ಮೇಕಳಿ. ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಹಾಗೂ ಗ್ರಾಪಂ ಸದಸ್ಯರು ಇದ್ದರು. ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಆರ್.ಟಿ. ಐರಾಣಿ ಸ್ವಾಗತಿಸಿದರು. ಕಿರಿಯ ಆರೋಗ್ಯ ಸಹಾಯಕ ಆನಂದ ಎಂ. ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts