More

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ

    ಬೆಟ್ಟದಪುರ: ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ತಮ್ಮ ಮನಸ್ಸಿನಲ್ಲಿರುವಂತಹ ಭಯವನ್ನು ಬದಿಗಿಟ್ಟು, ಆತ್ಮವಿಶ್ವಾಸದಿಂದ ಬರೆಯಬೇಕು ಎಂದು ತಹಸೀಲ್ದಾರ್ ಕುಂಞ ಅಹಮದ್ ಧೈರ್ಯ ತುಂಬಿದರು.

    ಬೆಟ್ಟದಪುರ ಎಸ್‌ಎಂಎಸ್ ಪ್ರೌಢಶಾಲೆಯಲ್ಲಿ ಅಮೋಘವರ್ಷ ಮತ್ತು ಅಮೃತ ವರ್ಷಿಣಿ ಟ್ರಸ್ಟ್ ವತಿಯಿಂದ ಶನಿವಾರ ಮಕ್ಕಳಿಗೆ ಪೆನ್ನು ಮತ್ತು ಪರೀಕ್ಷಾ ಪ್ಯಾಡ್ ವಿತರಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆಯಿಂದ ಅಭ್ಯಾಸ ಮಾಡಿದರೆ ಮಾತ್ರ ಯಶಸ್ಸು ಪಡೆಯಲು ಸಾಧ್ಯ ಎಂದರು.
    ಶಿಕ್ಷಕ ಗೊರಳ್ಳಿ ಜಗದೀಶ್ ಅವರು ಅಪಘಾತದಲ್ಲಿ ಮೃತಪಟ್ಟ ತಮ್ಮ ಮಕ್ಕಳ ನೆನಪಿನಲ್ಲಿ ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ಪರೀಕ್ಷಾ ಉಪಕರಣಗಳನ್ನು ನೀಡುವ ಸೇವೆ ಮಾಡುತ್ತ ಬಂದಿದ್ದಾರೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

    ಕಾರ್ಯಕ್ರಮದಲ್ಲಿ ಗಣ್ಯರು ಸಾಹಿತಿ ಪದ್ಮನಾಭ ಶರ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಮರ್ಪಿಸಿದರು. ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ಮತ್ತು ಪೆನ್ನುಗಳನ್ನು ವಿತರಣೆ ಮಾಡಿದರು. ಕಸಾಪ ಗೌರವ ಕಾರ್ಯದರ್ಶಿಗಳಾದ ಅಣ್ಣಯ್ಯಶೆಟ್ಟಿ, ಆಲನಹಳ್ಳಿ ಕೆಂಪರಾಜು, ಸಾಹಿತಿ ಅಂಬಲಾರೆ ಬಸವೇಗೌಡ, ವಕೀಲರ ಸಂಘದ ಮಾಜಿ ಅಧ್ಯಕ್ಷ ಜೆ.ಎಸ್. ನಾಗರಾಜು, ಎಸ್‌ಎಂಎಸ್ ವಿದ್ಯಾಸಂಸ್ಥೆಯ ಸಂಸ್ಥಾಪಕ ಬಿ.ವಿ.ಮಂಜುನಾಥ್, ಕಸಾಪ ಮಾಜಿ ಅಧ್ಯಕ್ಷ ಗೊರಳ್ಳಿ ಜಗದೀಶ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಸಿ ಕೃಷ್ಣ, ರೋಟರಿ ಮಾಜಿ ಅಧ್ಯಕ್ಷ ಸತೀಶ್, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಸತೀಶ್ ಆರಾಧ್ಯ, ಬೆಟ್ಟದಪುರ ಕಸಾಪ ಹೋಬಳಿ ಘಟಕ ಅಧ್ಯಕ್ಷ ಎಸ್.ಆರ್.ವೆಂಕಟೇಶ್, ಗೌರವ ಕಾರ್ಯದರ್ಶಿ ಆಲೂರು ಮಹೇಶ್, ಶಿಕ್ಷಕರಾದ ಅಂದಾನಯ್ಯ ಸೇರಿದಂತೆ ಮತ್ತಿತರರು ಹಾಜರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts