More

    ಪ್ಲಾಸ್ಟಿಕ್ ಬಳಸಿದಲ್ಲಿ ದಂಡ, ಕಾನೂನು ಕ್ರಮ

    ಕೊಟ್ಟೂರು: ಸರ್ಕಾರ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಿದ್ದು, ಅಂಗಡಿ ಮಾಲೀಕರು ಮತ್ತು ಉದ್ಯಮಿಗಳು ಬಳಸಿದಲ್ಲಿ ದಂಡದ ಜತೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಪಂ ಮುಖ್ಯಾಧಿಕಾರಿ ನಸರುಲ್ಲಾ ಎಚ್ಚರಿಕೆ ನೀಡಿದರು.

    ಪ್ಲಾಸ್ಟಿಕ್‌ಮುಕ್ತ ಅಭಿಯಾನ ನಿಮಿತ್ತ ಪಟ್ಟಣ ಪಂಚಾಯಿತಿ ಆವರಣದಲ್ಲಿ ಅಂಗಡಿ ಮಾಲೀಕರು, ಬೀದಿ ಬದಿ ವ್ಯಾಪಾರಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು. ಅಂಗಡಿ ಮಾಲೀಕರು ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲ ಕೊಡುವ ಬದಲು ಬಟ್ಟೆ ಚೀಲ ತರುವಂತೆ ಮನವರಿಕೆ ಮಾಡಬೇಕು. ಪ್ಲಾಸ್ಟಿಕ್ ಚೀಲ ಬಳಕೆ ದುಷ್ಪರಿಣಾಮ ಕುರಿತು ತಿಳಿವಳಿಕೆ ಮೂಡಿಸಬೇಕು ಎಂದರು.

    ಇದನ್ನೂ ಓದಿ:ಪ್ಲಾಸ್ಟಿಕ್ ಬಳಸಿದಲ್ಲಿ ದಂಡ, ಕಾನೂನು ಕ್ರಮ

    ಹರಪನಹಳ್ಳಿ ಪುರಸಭೆಯ ಪರಿಸರ ಇಂಜಿನಿಯರ್ ಅಮರೇಶ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸದಂತೆ ಸರ್ಕಾರ ಆದೇಶ ಹೊರಡಿಸಿದ್ದು, ಪಟ್ಟಣದ ಎಲ್ಲ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಯಾವುದೇ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸಬಾರದು ಎಂದರು. ಕಿರಿಯ ಆರೋಗ್ಯ ನಿರೀಕ್ಷಕಿ ಅನುಷಾ, ಜೆಇ ನಿಹಾರಿಕಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts