More

    ಪಾಚಮೈಲ್ ಚೆಕ್‌ಪೋಸ್ಟ್‌ನಲ್ಲಿ ವಾಗ್ವಾದ

    ಬೋರಗಾಂವ: ಪಟ್ಟಣದ ಬಳಿ ತೆರೆಯಲಾಗಿರುವ ಪಾಚಮೈಲ್ ಚೆಕ್‌ಪೋಸ್ಟ್‌ನಲ್ಲಿ ನೆರೆಯ ಮಹಾರಾಷ್ಟ್ರದ ಬಂದಿದ್ದ ಪ್ರಯಾಣಿಕರು ಹಾಗೂ ಚೆಕ್‌ಪೋಸ್ಟ್ ಸಿಬ್ಬಂದಿ ಮಧ್ಯೆ ಶನಿವಾರ ವಾಗ್ವಾದ ನಡೆದಿದ್ದು, ಕರ್ತವ್ಯದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ ಯತ್ನ ನಡೆದಿದೆ. ಮಹಾರಾಷ್ಟ್ರದ ಕೆಲ ಪ್ರವಾಸಿಗರು ಗಡಿ ಪ್ರವೇಶಿಸುವಾಗ ಚೆಕ್‌ಪೋಸ್ಟ್ ಅಧಿಕಾರಿಗಳು ಆರ್‌ಟಿಪಿಸಿಆರ್ ವರದಿ ಕೇಳಿದ್ದಾರೆ. ಅದಕ್ಕೆ ಆಕ್ಷೇಪಿಸಿದ ಪ್ರವಾಸಿಗರು ಅಧಿಕಾರಿಗಳ ಮೇಲೆ ಧಾವಿಸಿ ಬಂದಿದ್ದಾರೆ. ಮಾತಿಗೆ ಮಾತು ಬೆಳೆದು ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು. ನಂತರ ಸ್ಥಳಕ್ಕೆ ಧಾವಿಸಿದ ಶಿರೋಳ ತಾಲೂಕು ಶಿವಸೇನೆ ಕಾರ್ಯಕರ್ತರು, ಕರ್ನಾಟಕದ ಪೊಲೀಸರಿಂದ ದಿನನಿತ್ಯ ಒಡಾಡುವ ನಾಗರಿಕರಿಗೆ ಸುಖಾಸುಮ್ಮನೆ ತೊಂದರೆ ಆಗುತ್ತಿದೆ. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಚೆಕ್‌ಪೋಸ್ಟ್ ಬಳಿ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಈ ಕುರಿತು ಪ್ರತಿಕ್ರಿಯಿಸಿರುವ ಚಿಕ್ಕೋಡಿ ಪೊಲೀಸ್ ಉಪನಿರೀಕ್ಷಕ ಆರ್.ಆರ್.ಪಾಟೀಲ, ಮಾಂಗೂರ, ಆಯಕೋ ಹಾಗೂ ಪಾಚಮೈಲ್ ಚೆಕ್‌ಪೋಸ್ಟ್‌ನಲ್ಲಿ ಹೆಚ್ಚಿನ ಸಿಬ್ಬಂದಿ ನೇಮಕ ಮಾಡುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಸಿಬ್ಬಂದಿ ಸುರಕ್ಷತೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts