More

    ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರಬೇಕು:ಜಿಲ್ಲಾಧಿಕಾರಿ ಸಿ. ಸತ್ಯಭಾಮಾ

    ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಸಂಬಂಧ ಸೋಮವಾರ ವಿವಿಧ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು, ಮನವಿ ಪತ್ರ ಸ್ವೀಕರಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು, ಪೆನ್‌ಡ್ರೈವ್ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು ತನಿಖಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶು ಪಾಲನೆಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ. 101ನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ ಎಂದು ಪೌರಾಣಿಕ ಹಿನ್ನೆಲೆಯ ಸಂದೇಶವನ್ನು ವಿವರಿಸುವ ಮೂಲಕ ಪ್ರಜ್ವಲ್ ರೇವಣ್ಣ ಕುಟುಂಬದ ವಿರುಧ್ಧ ಆಸಮಾಧಾನ ವ್ಯಕ್ತಪಡಿಸಿದರು.
    ಈಗಲೂ ಎಲ್ಲಾ ರೀತಿಯಲ್ಲೂ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದ ಜಿಲ್ಲಾಧಿಕಾರಿ, ಇಲ್ಲಿ ಎಲ್ಲಾ ಹೋರಾಟಗಾರರು ಬಂದಿದ್ದೀರಿ. ನಿಮ್ಮೆಲ್ಲ ಮನವಿಯನ್ನು ಪರಿಗಣಿಸಿದ್ದೇನೆ. ಸೂಕ್ತ ತನಿಖೆಯಾಗಿ ನ್ಯಾಯ ಸಿಗುತ್ತದೆ. ಇಂತಹ ಘಟನೆಯಾದಾಗ ನಾವು ಪ್ರತಿಭಟಿಸಬೇಕು. ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವಷ್ಟು ಮಹಿಳೆ ಇಂದು ಸಮರ್ಥಳಿದ್ದಾಳೆ ಹಾಗೂ ಅದಕ್ಕೆ ಕಾನೂನಿನಲ್ಲಿ ಅವಕಾಶವೂ ಇದೆ. ನಾನು ನಿಮ್ಮ ಜತೆ ಇದ್ದೇನೆ ಎಂದು ಪ್ರತಿಭಟನಾಕಾರರಿಗೆ ಅಭಯ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts