More

    ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಿ

    ಹುಣಸೂರು: ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಕಟ್ಟುನಿಟ್ಟಾಗಿ ನಡೆಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸೋಣವೆಂದು ಚುನಾವಣಾಧಿಕಾರಿ ರುಚಿ ಬಿಂದಾಲ್ ಕರೆ ನೀಡಿದರು.


    ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆಯ ಆವರಣದಲ್ಲಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಮತಗಟ್ಟೆ ಅಧಿಕಾರಿಗಳಿಗೆ ಬುಧವಾರ ಆಯೋಜಿಸಿದ್ದ ಎರಡನೇ ಹಂತದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.


    ತಾಲೂಕಿನಲ್ಲಿ ಮತದಾನ ಕಾರ್ಯಕ್ಕಾಗಿ ಸಕಲ ಸಿದ್ಧತೆ ನಡೆದಿವೆ. ಮತಗಟ್ಟೆಯಲ್ಲಿ ಚುನಾವಣಾ ಸಿಬ್ಬಂದಿ ಪಾತ್ರ ಬಹುಮುಖ್ಯ. ಇವಿಎಂ ಸೀಲ್ ಓಪನ್ ಮಾಡುವುದರಿಂದ ಆರಂಭಗೊಂಡು ಮತದಾನ ಪೂರ್ಣಗೊಂಡ ನಂತರ ಸೀಲ್ ಮಾಡಿ ಸಂಬಂಧಪಟ್ಟ ಆಡಳಿತ ವ್ಯವಸ್ಥೆಗೆ ಒಪ್ಪಿಸುವವರೆಗೆ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ. ಮತದಾನದ ದಿನ ಮತದಾರರಲ್ಲಿ ಯಾವುದೇ ಗೊಂದಲ, ಅನುಮಾನಗಳಿಗೆ ಅವಕಾಶ ನೀಡದಂತೆ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಿರಿ. ಯಶಸ್ವಿಯಾಗಿ ಚುನಾವಣೆ ನಡೆಸುವ ಮೂಲಕ ಪ್ರಜಾಪ್ರಭುತ್ವ ಗೆಲುವಿಗೆ ದುಡಿಯೋಣವೆಂದರು.


    ಸಹಾಯಕ ಚುನಾವಣಾಧಿಕಾರಿ ಡಾ.ಎಸ್.ಯು.ಅಶೋಕ್ ಮಾತನಾಡಿ, ತಾಲೂಕಿನ 273 ಮತಗಟ್ಟೆಗಳಿಗೆ 1245 ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ 28 ಮಾಸ್ಟರ್ ಟ್ರೈನರ್‌ಗಳು ಎರಡನೇ ಹಂತದ ತರಬೇತಿ ನೀಡುತ್ತಿದ್ದಾರೆಂದು ತಿಳಿಸಿದರು.


    ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಬಿ.ಕೆ.ಮನು, ಇವಿಎಂ ನೋಡಲ್ ಅಧಿಕಾರಿ ಮಹಮದ್ ಹುಸೇನ್, ಉಪತಹಸೀಲ್ದಾರ್‌ಗಳು, ಸಿಬ್ಬಂದಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts