More

    ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು

    ಬಳ್ಳಾರಿ : ಜಿಲ್ಲಾದ್ಯಂತ 1972 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಮೇ 05 ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.
    ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಳ್ಳಾರಿ ಲೋಕಸಭಾ ವ್ಯಾಪ್ತಿಯಲ್ಲಿ 18,84,040 ಲಕ್ಷ ಮತದಾರರಿದ್ದು, ಮತದಾನ ದಿನದಂದು 5,952 ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು. ಮೇ 05 ರ ಸಂಜೆ 06 ರಿಂದ ಮೇ 08 ರ ಸಂಜೆ 06 ರ ವರೆಗೆ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಯಲಿದ್ದು, 05 ಕ್ಕಿಂತ ಹೆಚ್ಚು ಜನರು ಒಟ್ಟಾಗಿ ಓಡಾಡುವಂತಿಲ್ಲ. ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ಬಿಡಲು ಸೂಚಿಸಲಾಗಿದೆ. ಮತದಾನದಿನದಂದು ಮದ್ಯ ಮಾರಾಟ ನಿಷೇಧಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1219 ಮತಗಟ್ಟೆಗಳ ಪೈಕಿ 299 ಸೂಕ್ಷ್ಮ ಹಾಗೂ 69 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಒಟ್ಟಾರೆ 610 ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ ವ್ಯವಸ್ಥೆ ಮಾಡಿ, ಸಿಸಿ ಟಿವಿ ಕ್ಯಾಮೆರಾ ಮೂಲಕ ನೇರವಾಗಿ ಮತಗಟ್ಟೆಗಳ ಲೈವ್ ವಿಡಿಯೋ ನೋಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಚುನಾವಣಾ ಕಾರ್ಯದ ಮೇಲುಸ್ತುವಾರಿಗೆ ಒಟ್ಟು 330 ಮೈಕ್ರೋ ವೀಕ್ಷಕರನ್ನು ಮತಗಟ್ಟೆಗಳಿಗೆ ನಿಯೋಜಿಸಲಾಗಿದೆ. ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು 1,395 ಮತಗಟ್ಟೆ ಅಧಿಕಾರಿಗಳು, 1,395 ಸಹಾಯಕ ಅಧಿಕಾರಿಗಳು, 2,790 ಮತದಾನ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 5,952 ಅಧಿಕಾರಿ, ಸಿಬ್ಬಂದಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
    ಅಗತ್ಯ ಸೇವೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆ ಹಾಗೂ ಕ್ಷೇತ್ರಗಳ 863 ಮತದಾರರು ಮತ ಚಲಾಯಿಸಲು ಫಾರಂ 12 ಡಿ ಅಂಚೆ ಮತ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿ ಗಾಂಧಿ ಭವನದಲ್ಲಿ ಅಂಚೆ ಮತದಾನ ಕೇಂದ್ರ ತೆರೆಯಲಾಗಿತ್ತು. ಮೇ. 01 ರಿಂದ 03 ರವರೆಗೆ ಮತದಾನ ಜರುಗಿದ್ದು, 460 ಜನರು ಮತ ಚಲಾಯಿಸಿದ್ದಾರೆ. ಉಳಿದಂತೆ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಇದೇ ಗಾಂಧಿ ಭವನದಲ್ಲಿ ಫೆಸಿಲಿಟೇಶನ್ ಸೆಂಟರ್ ತೆರೆಯಲಾಗಿದ್ದು, ಮೇ. 06 ರವರೆಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
    ಎಎಸ್ಪಿ ನವೀನ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ದಿನದಂದು ಭದ್ರತೆಗೆ ಒಟ್ಟು 2,048 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೊರ ಜಿಲ್ಲೆಯಿಂದ ಸುಮಾರು 850 ಪೊಲೀಸ್ ಸಿಬ್ಬಂದಿ ಭದ್ರತಾ ಕಾರ್ಯಕ್ಕೆ ಜಿಲ್ಲೆಗೆ ಆಗಮಿಸಲಿವೆ. ಜಿಲ್ಲೆಗೆ ಸಿಆರ್ಪಿಎಫ್ ಪಡೆಯ ಮೂರು ತಂಡಗಳು ಆಗಮಿಸಿವೆ. ಜಿಲ್ಲೆಯಲ್ಲಿ 11 ರೌಡಿಶೀಟರ್ ಪ್ರಕರಣಗಳಲ್ಲಿ 09 ರೌಡಿಶೀಟರ್ಗಳನ್ನು ಗಡಿಪಾರು ಮಾಡಲಾಗಿದೆ. ಗೂಂಡ ಆಕ್ಟ್ ಅಡಿ 1 ಪ್ರಕರಣ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಾದ ಬಳಿಕ ಜಿಲ್ಲೆಯಲ್ಲಿ 8.41 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts