More

    ಪಾಲಿಕೆಗಳಿಗೆ ವಿಶೇಷ ಅನುದಾನ ಕೋರಿ ಪ್ರಸ್ತಾವನೆ

    ಧಾರವಾಡ: ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ತಲಾ 150 ಕೋಟಿ ರೂ. ವಿಶೇಷ ಅನುದಾನ ಕೋರಿ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ, ಲಾಕ್​ಡೌನ್​ನಿಂದಾಗಿ ಕುಂಠಿತಗೊಂಡ ನಗರಾಭಿವೃದ್ಧಿ ಇಲಾಖೆಯ ಕಾಮಗಾರಿಗಳನ್ನು ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸ್ಮಾರ್ಟ್ ಸಿಟಿ, ಸಿಡಿಪಿ ಯೋಜನೆ, ಯುಜಿಡಿ ಇತ್ಯಾದಿ ಕಾಮಗಾರಿಗಳ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದರು.

    1,200 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿಗೆ 24*7 ಕುಡಿಯುವ ನೀರು ಯೋಜನೆ ಸಿದ್ಧಗೊಂಡಿದ್ದು, ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕಾಮಗಾರಿ ಆರಂಭಕ್ಕೆ ಸೂಚಿಸಲಾಗಿದೆ ಎಂದರು.

    ಬೆಂಗಳೂರಿಗೆ ಆದ್ಯತೆ ನೀಡಿದಂತೆ ಹುಬ್ಬಳ್ಳಿ- ಧಾರವಾಡ ಅವಳಿನಗರದ ಅಭಿವೃದ್ಧಿಗೂ ಹೆಚ್ಚಿನ ಒತ್ತು ಕೊಡಲಾಗಿದೆ. ಸರ್ಕಾರದಿಂದ ಸ್ಮಾರ್ಟ್ ಸಿಟಿಗೆ 1,000 ಕೋಟಿ ರೂ., ಯುಜಿಡಿಗೆ 300 ಕೋಟಿ ರೂ. ನೀಡಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಸಚಿವ ಜಗದೀಶ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಇತರರಿದ್ದರು.

    ತೆರಿಗೆ ಹೆಚ್ಚಳ ಅನಿವಾರ್ಯ

    3 ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಹೆಚ್ಚಳ ಮಾಡುವುದು ಕಡ್ಡಾಯ. ಈ ಹಣ ಸರ್ಕಾರದ ಬೊಕ್ಕಸಕ್ಕಲ್ಲ; ಹೊರತಾಗಿ ಸಾರ್ವಜನಿಕರಿಗೆ ಮೂಲ ಸೌಕರ್ಯ ಕಲ್ಪಿಸಲು ಬಳಕೆ ಮಾಡಲಾಗುವುದು. ಆಸ್ತಿ ತೆರಿಗೆ ಪಾವತಿಯಿಂದ ಯಾವ ಸಂಸ್ಥೆಗೂ ವಿನಾಯಿತಿ ನೀಡಲಾಗದು ಎಂದರು.

    ಹೆಸರು ಬದಲಿಸುವುದಿಲ್ಲ…

    ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಪ್ರಸ್ತಾವ ಸರ್ಕಾರದ ಎದುರು ಇಲ್ಲ. ಆದರೆ, ಅದನ್ನು ಹೇಗೆ ನಿರ್ವಹಣೆ ಮಾಡಬೇಕು, ಎದುರಾಗಿರುವ ಸಮಸ್ಯೆಗಳ ಪರಿಹಾರದ ಕುರಿತು ರ್ಚಚಿಸಲಾಗಿದೆ ಎಂದು ಸಚಿವ ಸಚಿವ ಬಿ.ಎ. ಬಸವರಾಜ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts