More

    ಪಾಲಿಸಿ ಮಹನೀಯರ ಆದರ್ಶ  -ಶಾಸಕ ಕೆ.ಎಸ್.ಬಸವಂತಪ್ಪ ಸಲಹೆ 

    ದಾವಣಗೆರೆ: ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸುವ ಜತೆಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
    ತಾಲೂಕಿನ ಮಾಯಕೊಂಡ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
    ಮಹಾತ್ಮ ಗಾಂಧೀಜಿ, ಬಾಲಗಂಗಾಧರ್ ತಿಲಕ್, ಲಾಲಾ ಲಜಪತ್ ರಾಯ್, ಭಗತ್ ಸಿಂಗ್, ಸುಭಾಷ್ ಚಂದ್ರಬೋಸ್ ಸೇರಿ ಅನೇಕ ಮಹನೀಯರು ಸ್ವಾತಂತ್ರ್ಯಕ್ಕೆ ಹೋರಾಡಿ ತ್ಯಾಗ, ಬಲಿದಾನ ಮಾಡಿದ್ದಾರೆ. ಇದರ ಪರಿಣಾಮ ನಾವು ಇಂದು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
    ಮಕ್ಕಳಲ್ಲಿ ದೇಶಾಭಿಮಾನ, ದೇಶ ಪ್ರೇಮ ಬೆಳೆಸಬೇಕು. ಮಹನೀಯರ ಆದರ್ಶಗಳನ್ನು ಅವರಲ್ಲಿ ತುಂಬಬೇಕು. ಈ ಕ್ಷಣಕ್ಕೆ ಅವರನ್ನು ನೆನೆದು ಮರೆಯುವುದಲ್ಲ. ನಿತ್ಯ ಅವರನ್ನು ಸ್ಮರಿಸಿ ಅವರು ನಡೆದು ಬಂದ ಹಾದಿಯಲ್ಲಿ ಸಾಗಬೇಕೆಂದು ಕಿವಿಮಾತು ಹೇಳಿದರು.
    ಗ್ರಾಪಂ ಅಧ್ಯಕ್ಷೆ ಶಿವಮ್ಮ ಮಲ್ಲಿಕಪ್ಪ, ಉಪಾಧ್ಯಕ್ಷ ಮಂಜುನಾಥ್, ಫೈರೋಜ್ ಅಲಿ, ಮಾಯಕೊಂಡ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬಿ.ಟಿ.ಹನುಮಂತಪ್ಪ, ಜಿಪಂ ಮಾಜಿ ಸದಸ್ಯ ವೆಂಕಟೇಶ್, ರುದ್ರೇಶ್, ಮಹಮದ್, ರಾಜಶೇಖರ್, ನಾಗರಾಜ, ಹನುಮಂತಪ್ಪ, ಉಪ ತಹಸೀಲ್ದಾರ್ ಬಸವರಾಜಪ್ಪ, ಗ್ರಾಪಂ ಪಿಡಿಒ, ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts