More

    ಪಿಎಸ್​ಐ ಅರ್ಜುನ್ ವಜಾಗೊಳಿಸಿ, ಮಾಜಿ ಸಚಿವ ಬಿ.ಬಿ.ನಿಂಗಯ್ಯ ಒತ್ತಾಯ

    ಮೂಡಿಗೆರೆ: ದಲಿತ ಯುವಕನ ಮೇಲೆ ಗೋಣಿಬೀಡು ಪಿಎಸ್​ಐ ಅರ್ಜುನ್ ದೌರ್ಜನ್ಯ ನಡೆಸಿ ಮೂತ್ರ ಕುಡಿಸಿದ ಪ್ರಕರಣದಿಂದ ಜಿಲ್ಲೆಯ ಜನತೆ ತಲೆತಗ್ಗಿಸುವಂತಾಗಿದೆ ಎಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಆರೋಪಿಸಿದರು.

    ಶನಿವಾರ ಜೆಡಿಎಸ್, ಎಡಪಕ್ಷಗಳು, ರೈತ ಸಂಘದ ಸದಸ್ಯರು ಕಿರುಗುಂದ ಗ್ರಾಮದ ಸಂತ್ರಸ್ತ ಯುವಕ ಪುನೀತ್ ಮನೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಘಟನೆ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿ ಸಿಐಡಿ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಲೋಪವಾಗದಂತೆ ಎಚ್ಚರವಹಿಸಿ ಪ್ರಕರಣದ ಸತ್ಯಾಸತ್ಯತೆ ಬಯಲು ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

    ದಲಿತ ಯುವಕನಿಗೆ ಪಿಎಸ್​ಐ ಮೂತ್ರ ಕುಡಿಸಿದ್ದರೆ ಅವರನ್ನು ಕೆಲಸದಿಂದ ವಜಾಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ರಾಜಕೀಯ ನುಸುಳಬಾರದು. ಪಿಎಸ್​ಐಯಿಂದ ಪೊಲೀಸ್ ಇಲಾಖೆ ಕಳಂಕ ಬಂದಿದೆ. ಇದರಿಂದ ಹೊರಬರಬೇಕಾದರೆ ಜನರಿಗೆ ಸತ್ಯ ತಿಳಿಯಬೇಕು. ತನಿಖೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಮನವಿ ಮಾಡಿದರು.

    ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ ಮಾತನಾಡಿ, ಸಿಐಡಿ ತನಿಖೆಯಿಂದ ನ್ಯಾಯ ಸಿಗುವುದು ಅಸಾಧ್ಯ. ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಯಾಗಬೇಕು. ಪಿಎಸ್​ಐ ಅರ್ಜುನ್ ಅವರನ್ನು ವಶಕ್ಕೆ ಪಡೆಯಬೇಕು. ಜಿಲ್ಲೆಯಲ್ಲಿ ಇಂತಹ ಗಂಭೀರ ಪ್ರಕರಣ ನಡೆದು 20 ದಿನ ಕಳೆದರೂ ಸಂಸದೆ ಶೋಭಾ ಕರಂದ್ಲಾಜೆ, ಉಪಸಭಾಪತಿ ಎಂ.ಕೆ ಪ್ರಾಣೇಶ್, ಶಾಸಕ ಎಂ.ಪಿ.ಕುಮಾರಸ್ವಾಮಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಂತ್ರಸ್ತ ಯುವಕನ ಮನೆಗೆ ಭೇಟಿ ನೀಡಿಲ್ಲ ಎಂದು ದೂರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts