More

    ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

    ನಂಜನಗೂಡು: ತಾಲೂಕಿನ ಬಿಳಿಗೆರೆ ಪೊಲೀಸ್ ಠಾಣೆ ಪಿಎಸ್‌ಐ ಆಕಾಶ್, ದಲಿತ ಸಂಘಟನೆಗಳ ಕಾರ್ಯಕರ್ತರ ಹೋರಾಟವನ್ನು ಹತ್ತಿಕ್ಕುವ ಮೂಲಕ ಜನವಿರೋಧಿ ನೀತಿ ಪ್ರದರ್ಶಿಸುತ್ತಿದ್ದು, ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

    ನಂದಿಗುಂದ ಗ್ರಾಮದ ಬಡ ರೈತನ ಜಮೀನಿಗೆ ರಕ್ಷಣೆ ನೀಡುವಂತೆ ದಲಿತ ಸಂಘಟನೆ ಕಾರ್ಯಕರ್ತರು ಪಿಎಸ್‌ಐ ಆಕಾಶ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದಾಗ, ಸಂಘಟನೆಗಳ ಬಗ್ಗೆ ಲಘುವಾಗಿ ಮಾತನಾಡಿ ನಿಂದಿಸಿದ್ದಾರೆ. ಬಂಡವಾಳಶಾಹಿಗಳಿಂದ ಪ್ರತಿ ದೂರು ಪಡೆದುಕೊಂಡು ಬಡ ರೈತ ಹಾಗೂ ದಲಿತ ಸಂಘಟನೆ ಕಾರ್ಯಕರ್ತರ ಮೇಲೆ ಸುಳ್ಳು ದೂರು ದಾಖಲು ಮಾಡಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಮಹೇಶ್‌ಕುಮಾರ್ ಅವರ ಮೂಲಕ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಅಂತ್ಯಗೊಳಿಸಿದರು.

    ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಮಲ್ಲಹಳ್ಳಿ ನಾರಾಯಣ್, ಚುಂಚನಹಳ್ಳಿ ಮಲ್ಲೇಶ್, ಕಾರ್ಯ ಬಸವಣ್ಣ, ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್.ವಿದ್ಯಾಸಾಗರ್, ನಗರ್ಲೆ ವಿಜಯ್‌ಕುಮಾರ್, ದಲಿತ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಂಕರಪುರ ಸುರೇಶ್, ಅಭಿ ನಾಗಭೂಷಣ್, ಬೊಕ್ಕಹಳ್ಳಿ ಮಹದೇವಸ್ವಾಮಿ, ಯಶ್ವಂತ್, ಮಂಜು ಶಂಕರಪುರ, ರೈತ ಸಂಘದ ತಾಲೂಕು ಅಧ್ಯಕ್ಷ ಸತೀಶ್‌ರಾವ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts