More

    ಪಿಡಿಒ ವರ್ಗಾವಣೆಗೆ ಒತ್ತಾಯಿಸಿ ಪ್ರತಿಭಟನೆ

    ಗುಂಡ್ಲುಪೇಟೆ: ತಾಲೂಕಿನ ಕಬ್ಬನಹಳ್ಳಿ ಗ್ರಾಮದ ಪಿಡಿಒ ವರ್ಗಾವಣೆಗೆ ಒತ್ತಾಯಿಸಿ ಅಧ್ಯಕ್ಷೆ, ಉಪಾಧ್ಯಕ್ಷೆ ಹಾಗೂ ಸದಸ್ಯರು ಗ್ರಾಮಪಂಚಾಯಿತಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

    ಪಿಡಿಒ ಉಷಾರಾಣಿ ಕಳೆದ ಎರಡು ವರ್ಷಗಳಿಂದ ಗ್ರಾಮದ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುತ್ತಿಲ್ಲ. ಗ್ರಾಮದಲ್ಲಿ ಸ್ವಚ್ಛತೆ ಸೇರಿದಂತೆ ಆಡಳಿತ ಮಂಡಳಿ ಹೇಳಿದ ಕೆಲಸವನ್ನೂ ಮಾಡುತ್ತಿಲ್ಲ. ಇದರಿಂದ ಸಾರ್ವಜನಿಕರ ಯಾವುದೇ ಕೆಲಸಕಾರ್ಯಗಳು ಆಗದೆ ಹಿಡಿಶಾಪ ಹಾಕುತ್ತಿದ್ದಾರೆ. ಅಧ್ಯಕ್ಷರು ಹಾಗೂ ಸದಸ್ಯರು ತಮ್ಮ ಕ್ಷೇತ್ರದ ಮತದಾರರಿಗೆ ಮುಖ ತೋರಿಸಲು ಸಾಧ್ಯವಾಗದಂತಾಗಿದೆ. ಅದ್ದರಿಂದ ಪಿಡಿಒ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

    ವಿಷಯ ತಿಳಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶ್ರೀಕಂಠರಾಜೇ ಅರಸು ಸ್ಥಳಕ್ಕೆ ತೆರಳಿ ಸದಸ್ಯರೊಂದಿಗೆ ಮಾತನಾಡಿದರು. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒ ಅವರ ಗಮನಕ್ಕೆ ತರುವುದಾಗಿ ಹೇಳಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

    ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕನಾಗಮ್ಮ, ಉಪಾಧ್ಯಕ್ಷೆ ಸುಜಾತಾ, ಸದಸ್ಯರಾದ ಗೋಪಾಲಸ್ವಾಮಿ, ಮಹೇಶ, ಶಿವು, ಮಹದೇವ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts