More

    ಪಿಡಿಒ ವರ್ಗಾವಣೆ ಹಿಂದೆ ರಾಜಕೀಯ ದುರುದ್ದೇಶ

    ತೀರ್ಥಹಳ್ಳಿ: ಮೇಲಿನಕುರುವಳ್ಳಿ ಗ್ರಾಪಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿಡಿಒ ಸರಿತಾ ಅವರನ್ನು ಭದ್ರಾವತಿಗೆ ವರ್ಗಾಯಿಸಲಾಗಿದೆ. ಇದರಲ್ಲಿ ರಾಜಕೀಯ ದುರುದ್ದೇಶವಿದ್ದು ವರ್ಗಾವಣೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ತಾಲೂಕು ದಲಿತ ಸಂಘರ್ಷ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
    ತಾಲೂಕು ಕಚೇರಿ ಎದುರು ಸಭೆ ನಡೆಸಿದ ಬಿಜೆಪಿ ಜಿಲ್ಲಾ ಎಸ್‍ಸಿ ಮೋರ್ಚಾ ಅಧ್ಯಕ್ಷ ಕಾಸರವಳ್ಳಿ ಶ್ರೀನಿವಾಸ್ ಮಾತನಾಡಿ, ಸರಿತಾ ಅವರು ಕಳೆದ 12 ವರ್ಷಗಳಿಂದ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಜೂನ್ ತಿಂಗಳಿನಿಂದ ಮೇಲಿನಕುರುವಳ್ಳಿ ಗ್ರಾಪಂನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ ಕೆಲಸ ಮಾಡುತ್ತಿದ್ದಾರೆ. ನೊಂದವರ ಸಮಸ್ಯೆಗಳಿಗೆ ನಿಷ್ಪಕ್ಷಪಾತವಾಗಿ, ಪ್ರಾಮಾಣಿಕವಾಗಿ ಯಾವುದೇ ಆಮಿಷಕ್ಕೆ ಒಳಗಾಗದೆ ಸರಿತಾ ಅವರು ಆಡಳಿತ ನಡೆಸಿದ್ದು ಗ್ರಾಪಂನಲ್ಲಿನ ಕಾಂಗ್ರೆಸ್ ಬೆಂಬಲಿತ ಕೆಲ ಸದಸ್ಯರ ಕಾನೂನು ಬದ್ಧವಲ್ಲದ ಕೆಲಸಗಳಿಗೆ ಸಹಕಾರ ನೀಡಲಿಲ್ಲ ಎಂಬ ಕಾರಣಕ್ಕೆ ಅವರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸುಳ್ಳು ಆರೋಪ ಮಾಡಿದ್ದಾರೆ. ಅಲ್ಲದೆ ಅವರ ವಿರುದ್ಧ ಪ್ರತಿಭಟನೆ ನಡೆಸಿ ಬೇರೆ ತಾಲೂಕಿಗೆ ವರ್ಗಾವಣೆ ಮಾಡಿಸಿದ್ದಾರೆ ಎಂದು ದೂರಿದರು.
    ರಾಜಕೀಯ ದುರುದ್ದೇಶದಿಂದ ಕೂಡಿರುವ ಈ ವರ್ಗಾವಣೆಯನ್ನು ರಾಜ್ಯ ಸರ್ಕಾರ ಶೀಘ್ರ ರದ್ದುಗೊಳಿಸಿ ಸರಿತಾ ಅವರನ್ನು ಮೇಲಿನಕುರುವಳ್ಳಿ ಗ್ರಾಪಂಗೇ ವರು ವರ್ಗಾವಣೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಜಿಲ್ಲಾ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪ್ರಕಾಶ್ ಲಿಗಾಡೆ, ಚಂದ್ರಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts