More

    ಪಿಪಿಪಿ ಮಾದರಿಯಲ್ಲಿ ಕಂಠೀರವ ಕ್ರೀಡಾಂಗಣ ಹೈಟೆಕ್ , ತ್ರಿ ಸ್ಟಾರ್, ೈವ್ ಸ್ಟಾರ್ ಹೋಟೆಲ್, ವಾಣಿಜ್ಯ ಮಳಿಗೆ, ಪಾರ್ಕಿಂಗ್ ಸೌಲಭ್ಯ


    ವಿಜಯವಾಣಿ ಸುದ್ದಿಜಾಲ ಬೆಂಗಳೂರು
    ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಹೈಟೆಕ್ ಆಗಲಿದೆ. ಸಂಪೂರ್ಣ ಹೊಸ ರೂಪದೊಂದಿಗೆ ಸುಸಜ್ಜಿತ ಕ್ರೀಡಾಂಗಣ ತಲೆ ಎತ್ತಿ ನಿಲ್ಲಲಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾಂಗಣ ಉನ್ನತೀಕರಿಸಲು ಸರ್ಕಾರ ಉದ್ದೇಶಿಸಿದೆ.
    ಈಗಾಗಲೆ ನೀಲನಕ್ಷೆ (ಡಿಪಿಆರ್) ಸಿದ್ದವಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 1,500 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣದ ಉನ್ನತೀಕರಣಕ್ಕೆ ಉದ್ದೇಶ ಹೊಂದಲಾಗಿದೆ.
    ಪಿಪಿಪಿ ಮಾದರಿಯಲ್ಲಿ ಬೆಂಗಳೂರಿನ ಹೃದಯಭಾಗದಲ್ಲಿರುವ ಕಂಠೀರವ ಕ್ರೀಡಾಂಗಣವನ್ನು ಹೈಟೆಕ್ ಮಾಡುವ ಕುರಿತು ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು.
    ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವಕ್ಕಾಗಿ ಕಂಪನಿಗಳ ಜತೆ ಮಾತುಕತೆ ನಡೆಸಲಾಗುತ್ತಿದ್ದು, 2 ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ. ಒಳಾಂಗಣ ಸೇರಿದಂತೆ ಇಡೀ ಕ್ರೀಡಾಂಗಣವನ್ನು ಹೈಟೆಕ್ ಮಾಡಲು ನೀಲನಕ್ಷೆ ಸಿದ್ದಪಡಿಸಲಾಗಿದೆ. ಜತೆಗೆ ಬಹುಮಹಡಿ ಕಟ್ಟಡ, ತ್ರಿ ಸ್ಟಾರ್ ಮತ್ತು ಪಂಚತಾರಾ ಹೊಟೇಲ್ಗಳು, ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳನ್ನು ಒಳಗೊಳ್ಳಲಿದೆ ಎಂದರು.
    ಜಿಲ್ಲಾ ಮಟ್ಟದಲ್ಲಿ ಕ್ರೀಡಾಂಗಣದ ಅಭಿವೃದ್ದಿಗೆ ಖಾಸಗಿ ಕಂಪನಿಗಳು ಮುಂದೆ ಬಂದಲ್ಲಿ, ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೆ, ಕ್ರೀಡಾಂಗಣದ ಅಭಿವೃದ್ಧಿಗೆ ಸಿಎಸ್‌ಆರ್ ನಿಧಿ ಬಳಕೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

    ಓಲಂಪಿಕ್‌ಗೆ ಒತ್ತು ಕೊಡಿ:
    ರಾಜ್ಯದಿಂದ ಓಲಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳ ಸಂಖ್ಯೆ ಹೆಚ್ಚಾಗಬೇಕು ಎನ್ನುವುದೇ ನಮ್ಮ ಮೂಲ ಉದ್ದೇಶ. ಓಲಂಪಿಕ್‌ನ 14 ವಿಧದ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು 100ಕ್ಕೂ ಹೆಚ್ಚು ಕ್ರೀಡಾಪಟುಗಳು ಸಿದ್ದವಾಗಬೇಕು. ಕನಿಷ್ಟ 50 ಕ್ರೀಡಾಪಟುಗಳಾದರೂ ಅರ್ಹತೆ ಪಡೆಯಬೇಕು. ಆ ನಿಟ್ಟಿನಲ್ಲಿ ಅಗತ್ಯವಿರುವ ಕ್ರೀಡಾ ಸೌಲಭ್ಯ, ತರಬೇತಿ ನೀಡಲು ಕ್ರಮ ತೆಗೆದುಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಮೈ ಚಳಿ ಬಿಟ್ಟು ಕೆಲಸ ಮಾಡಿ.
    ಕ್ರೀಡೆಗೆ ಅಗತ್ಯವಾದ ಎಲ್ಲ ಸೌಲಭ್ಯ ನೀಡಲು ಸರ್ಕಾರ ಸಿದ್ದವಿದೆ. ಕೇವಲ ಅನುದಾನ ನೀಡಿದ ಮಾತ್ರಕ್ಕೆ ಎಲ್ಲವೂ ಸಾಧ್ಯವಾಗುವುದಿಲ್ಲ. ಸರ್ಕಾರ ನೀಡಿದ ಸೌಲಭ್ಯವನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳಬೇಕು. ಇದಕ್ಕೆ ಅಧಿಕಾರಿಗಳು ಮೈ ಚಳಿ ಬಿಟ್ಟು ಕೆಲಸ ಮಾಡಬೇಕು. ಮೀಸಲಿಟ್ಟ ಅನುದಾದನ ಬಳಕೆಯಾಗದೆ ಉಳಿದರೆ ಅಥವಾ ಸರಿಯಾದ ರೀತಿಯಲ್ಲಿ ಕಾರ್ಯ ಅನುಷ್ಠಾನವಾಗದ್ದರೆ ಕ್ರೀಡಾಪಟುಗಳ ಬದುಕನ್ನೇ ನಾಶಮಾಡಿದಂತಾಗುತ್ತದೆ. ಅಧಿಕಾರಿಗಳು ಈ ವಿಚಾರ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಸೂಚಿಸಿದರು.
    ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೆಕ್ಕ ಶೀರ್ಷಿಕೆ ಪರಿಶೀಲಿಸಿದಾಗ ಜಿಲ್ಲಾ ಮಟ್ಟದಲ್ಲಿ ಹಂಚಿಕೆಯಾದ ಅನುದಾನ ಕಡಿಮೆ ಪ್ರಮಾಣದಲ್ಲಿ ವೆಚ್ಚವಾಗಿದ್ದನ್ನು ಗಮನಿಸಿದ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

    1 ಸಾವಿರ ಕೋಟಿ ಅನುದಾನ:
    ಪಂಜಾಬ್, ಹರಿಯಾಣದಂತ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಕ್ರೀಡೆಗೆ ನೀಡುತ್ತಿರುವ ಅನುದಾನ ತೀರಾ ಕಡಿಮೆ ಇದೆ. ಹೀಗಾಗಿ ಸದ್ಯ ನೀಡುತ್ತಿರುವ ಅನುದಾನಕ್ಕಿಂತ ಮೂರು ಪಟ್ಟು ಹೆಚ್ಚು ಅಂದರೆ, ಕನಿಷ್ಟ 1 ಸಾವಿರ ಕೋಟಿ ರೂ. ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

    ಯುವಜನ ಮೇಳ ಇನ್ನು, ಉದ್ಯೋಗ ಮೇಳ:
    ಯುವ ಸಬಲೀಕರಣಕ್ಕಾಗಿ ಸರ್ಕಾರ ನೂತನ ಯೋಜನೆ ರೂಪಿಸುತ್ತಿದೆ. ‘ಯುವ ನೀತಿಗೆ ಹೊಸ ರೂಪ ನೀಡಿ, ಯುವ ಜನ ಮೇಳವನ್ನು ಉದ್ಯೋಗಮೇಳವನ್ನಾಗಿ ಪರಿವರ್ತಿಸುವ ಮೂಲಕ ಯುವ ಜನತೆಗೆ ಉದ್ಯೋಗ ಸೃಷ್ಟಿಸಲು ಉದ್ದೇಶಿಸಲಾಗಿದೆ. ರಾಜ್ಯದಲ್ಲಿ 2.5 ಕೋಟಿ ಯುವ ಜನರಿದ್ದು, ಹೊಸ ಯುವ ನೀತಿಯಿಂದ ಅವರೆಲ್ಲರನ್ನು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಚಿಂತನೆ ಇದೆ ಎಂದು ತಿಳಿಸಿದರು.
    ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ. ಪುರುಷೋತ್ತಮ್, ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

    ಬಾಕ್ಸ್:
    ಕೋವಿಡ್-19 ಮಾರ್ಗಸೂಚಿ ಬಿಡುಗಡೆ

    ಕೋವಿಡ್-19ರ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕ್ರೀಡಾ ಚಟುವಟಿಕೆ ಪುನಾರಂಭಿಸುವ ಹಿನ್ನೆಲೆಯಲ್ಲಿ ಸಿದ್ಧಪಡಿಸಿರುವ ಮಾರ್ಗಸೂಚಿಯನ್ನು ಕ್ರೀಡಾ ಸಚಿವ ನಾರಾಯಣಗೌಡ ಬಿಡುಗಡೆ ಮಾಡಿದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts