More

    ಪಿಯುಸಿ ಪರೀಕ್ಷೆಗೆ ಸೂಕ್ತ ಕ್ರಮ ಕೈಗೊಳ್ಳಿ

    ಕಾರವಾರ: ಹೊರ ಊರುಗಳಿಂದ ಪಿಯುಸಿ ಪರೀಕ್ಷೆಗೆ ಬರಬೇಕಾದವರು ಒಂದು ದಿನ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರವಿರುವಲ್ಲಿಗೆ ತಲುಪುವಂತೆ ಸೂಚನೆ ನೀಡಿ ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜೂನ್ 18 ರಂದು ಆಯೋಜನೆಯಾಗಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಸಂಬಂಧ ತಮ್ಮ ಕಚೇರಿಯಲ್ಲಿ ಸೋಮವಾರ ವಿಡಿಯೋ ಕಾನ್ಪರೆನ್ಸ್​ನಲ್ಲಿ ಅವರು ಮಾತನಾಡಿದರು. ಸಂಚಾರ ವ್ಯವಸ್ಥೆಗೆ ಸಮಸ್ಯೆಯಾಗದಂತೆ ನಿಗಾ ವಹಿಸಬೇಕು ಒಟ್ಟಿನಲ್ಲಿ ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತನಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು. ಮಳೆ ಹೆಚ್ಚಿರುವುದರಿಂದ ಪರೀಕ್ಷಾ ಕೇಂದ್ರದಲ್ಲಿ ನೀರು ಬರದಂತೆ, ಬೆಳಕಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ವಿದ್ಯುತ್ ಸಮಸ್ಯೆ ಉಂಟಾಗದಂತೆ ನಿಗಾ ವಹಿಸಬೇಕು ಎಂದರು. ಎಲ್ಲ ವಿದ್ಯಾರ್ಥಿಗಳನ್ನೂ ಪ್ರವೇಶ ದ್ವಾರದಲ್ಲೇ ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಬೇಕು. ಮಾಸ್ಕ್ ಹಾಕಿ ಬರದ ವಿದ್ಯಾರ್ಥಿಗಳಿಗೆ ಮಾಸ್ಕ್ ವ್ಯವಸ್ಥೆ ಮಾಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್, ಎಸಿ ಪ್ರಿಯಾಂಗಾ ಎಂ. ಇದ್ದರು.

    ಮೂವತ್ತು ಪರೀಕ್ಷಾ ಕೇಂದ್ರಗಳು
    ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎನ್.ಬಗಲಿ, ಜಿಲ್ಲೆಯ 30 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 13,568 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಅದರಲ್ಲಿ 577 ವಿದ್ಯಾರ್ಥಿಗಳು ಹೊರ ಜಿಲ್ಲೆಯವರಾಗಿದ್ದರೆ, 9 ಜನ ಹೊರ ರಾಜ್ಯದವರಾಗಿದ್ದಾರೆ. ಪರಸ್ಪರ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಒಂದು ಬ್ಲಾಕ್​ಗೆ 12 ಜನ ವಿದ್ಯಾರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಿದ್ಧತೆ
    ಸಿದ್ದಾಪುರ:
    ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಕೋವಿಡ್-19 ಆತಂಕದ ನಡುವೆಯೂ ಮಕ್ಕಳ ಸುರಕ್ಷತೆ ಹಾಗೂ ಭದ್ರತೆ ಗಮನದಲ್ಲಿಟ್ಟುಕೊಂಡು ಯಾವುದೇ ಗೊಂದಲ ಇಲ್ಲದೇ ಎಲ್ಲ ಇಲಾಖೆಗಳ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಇಒ ಸದಾನಂದ ಸ್ವಾಮಿ ಹೇಳಿದರು.

    ಸ್ಥಳೀಯ ತಾಪಂ ಸಭಾಂಗಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಪೂರ್ವ ತಯಾರಿ ಕುರಿತು ಅವರು ಮಾಹಿತಿ ನೀಡಿದರು. ಸರ್ಕಾರದ ಸೂಚನೆಯಂತೆ ಜೂ. 25ರಿಂದ ಜು. 3ರವರೆಗೆ ಪರೀಕ್ಷೆ ನಡೆಯಲಿದ್ದು, ತಾಲೂಕಿನ ಏಳು ಪರೀಕ್ಷಾ ಕೇಂದ್ರಗಳಲ್ಲಿ 1,307 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಪರೀಕ್ಷೆ ಕೇಂದ್ರದಲ್ಲಿ ಎರಡು ತುರ್ತು ಪರೀಕ್ಷೆ ಕೊಠಡಿ ಇರಲಿವೆ. ನಿತ್ಯ ಪರೀಕ್ಷೆ ಬೆಳಗ್ಗೆ 10.30ರಿಂದ ಆರಂಭವಾಗಲಿದ್ದು, ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರಕ್ಕೆ 9.30ರೊಳಗೆ ಬರಬೇಕು. ವಿದ್ಯಾರ್ಥಿಗಳನ್ನು ಆರೋಗ್ಯ ಸಿಬ್ಬಂದಿ ಥರ್ಮಲ್ ಸ್ಕ್ರೀನಿಂಗ್ ನಡೆಸಿಯೇ ಕೊಠಡಿಯೊಳಗೆ ಬಿಡುತ್ತಾರೆ. ಜ್ವರದ ಲಕ್ಷಣ ಕಂಡುಬಂದಲ್ಲಿ ಅಂಥ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ನಡೆಸಲಾಗುತ್ತದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಮಂಜುಳಾ ಎಸ್. ಭಜಂತ್ರಿ ಮಾತನಾಡಿ, ಪಟ್ಟಣದ ಪರೀಕ್ಷೆ ಕೇಂದ್ರಕ್ಕೆ ಪಪಂ ಹಾಗೂ ಗ್ರಾಮೀಣ ಪ್ರದೇಶದ ಪರೀಕ್ಷೆ ಕೇಂದ್ರಕ್ಕೆ ಗ್ರಾಪಂನವರು ಸ್ಯಾನಿಟೈಸ ಮಾಡಬೇಕು ಎಂದರು. ಸಾರಿಗೆ ಅಧಿಕಾರಿ ದಿವಾಕರ ಮಾತನಾಡಿ, ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ ನಾಯ್ಕ, ಸಿಪಿಐ ಪ್ರಕಾಶ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts