More

    ಪಿಯು ವಿದ್ಯಾರ್ಥಿಗಳಿಗೆ ಡಿಸಿ ಪಾಠ

    ಚಿಕ್ಕಮಗಳೂರು: ಜಿಲ್ಲಾಡಳಿತದ ಬಿಡುವಿಲ್ಲದ ಕಾರ್ಯದ ಒತ್ತಡದ ನಡುವೆಯೂ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಶನಿವಾರ ನಗರದ ಮಲೆನಾಡು ವಿದ್ಯಾಸಂಸ್ಥೆಗೆ ತೆರಳಿ ಪಿಯು ವಿದ್ಯಾರ್ಥಿಗಳಿಗೆ ಪಾಠ ಮಾಡುವ ಮೂಲಕ ಶಿಕ್ಷಣ ಪ್ರೀತಿ ಮೆರೆದರು.

    ಕೆಲ ದಿನಗಳ ಹಿಂದೆ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿಯನ್ನು ಆಡಳಿತ ಮಂಡಳಿ ಮತ್ತು ಬೋಧಕ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಒಂದು ದಿನ ಪಾಠ ಮಾಡುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಶನಿವಾರ ಬೆಳಗ್ಗೆ ಕಾಲೇಜಿಗೆ ತೆರಳಿ ಮೂರು ಗಂಟೆಗೂ ಅಧಿಕ ಕಾಲ ಪಿಯು ವಿದ್ಯಾರ್ಥಿಗಳಿಗೆ ಗಣಿತಶಾಸ್ತ್ರ ಮತ್ತು ಭೌತಶಾಸ್ತ್ರದ ಕುರಿತು ಸುದೀರ್ಘವಾಗಿ ಪಾಠ ಮಾಡಿದರು.

    ಗಣಿತಶಾಸ್ತ್ರ ಮತ್ತು ಭೌತಶಾಸ್ತ್ರದ ಕಗ್ಗಂಟುಗಳನ್ನು ವಿದ್ಯಾರ್ಥಿಗಳೆದುರು ಎಳೆಎಳೆಯಾಗಿ ಬಿಡಿಸಿಟ್ಟ ಜಿಲ್ಲಾಧಿಕಾರಿ ಪೂರಕವಾದ ಉಪಮೆಗಳು, ಕಥೆಗಳನ್ನು ಮನಮುಟ್ಟುವಂತೆ ವಿವರಿಸುವ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ಹಿಡಿದಿಟ್ಟರು. ವಿದ್ಯಾರ್ಥಿಗಳೊಂದಿಗೆ ಪ್ರೀತಿ, ವಿಶ್ವಾಸ ಮತ್ತು ಸ್ನೇಹದಿಂದ ಮಾತನಾಡಿದರು. ಕಲಿಕೆಯಲ್ಲಿ ಯಶಸ್ವಿಯಾಗುವ ಮಾರ್ಗವನ್ನು ಮನಮುಟ್ಟುವಂತೆ ಬೋಧಿಸುವ ಮೂಲಕ ತಾವೊಬ್ಬ ಉತ್ತಮ ಬೋಧಕ ಎಂಬುದನ್ನು ತೋರ್ಪಡಿಸಿದರು.

    ವಿಷಯ ಅರ್ಥವಾದರೆ ಕಲಿಕೆ ಸುಲಭವಾಗುತ್ತದೆ. ವಿದ್ಯಾರ್ಥಿಗಳು ಎಲ್ಲವನ್ನೂ ಒಂದೇ ಸಲ ತಲೆಯಲ್ಲಿ ತುಂಬಿಕೊಳ್ಳಬಾರದು. ಎಷ್ಟು ಬೇಕೋ ಅಷ್ಟು ಸ್ವಲ್ಪ ಸ್ವಲ್ಪವಾಗಿ ವಿಷಯಗಳನ್ನು ತುಂಬಿಕೊಳ್ಳಬೇಕು, ವಿಜ್ಞಾನ ಅದ್ಭುತಗಳ ಆಗರ. ಮುಕ್ತಮನಸ್ಸಿನಿಂದ ಅಭ್ಯಾಸ ಮಾಡಿದರೆ ಅದರ ದರ್ಶನವಾಗುತ್ತದೆ ಮತ್ತು ಅರ್ಥವಾಗುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts