More

    ಪೀಠ ಸ್ಥಾಪನೆ ವಿಳಂಬಕ್ಕೆ ತೀವ್ರ ಆಕ್ರೋಶ

    ಬೆಳಗಾವಿ: ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಗ್ರಾಹಕರ ಆಯೋಗ ಪೀಠ ಸ್ಥಾಪನೆಗೆ ಸರ್ಕಾರವು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಮಂಗಳವಾರ ನಗರದ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸಚಿವರು, ಶಾಸಕರು ನಿರ್ಲಕ್ಷೃ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

    ಬೆಳಗಾವಿ ಮತ್ತು ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಗ್ರಾಹಕರ ಆಯೋಗ ಪೀಠ ಸ್ಥಾಪನೆಗೆ ಒಟ್ಟಿಗೆ ಅನುಮತಿ ಸಿಕ್ಕಿತ್ತು. ಇದೀಗ ಆರ್ಥಿಕ ಇಲಾಖೆಯು ಕಲಬುರಗಿಯಲ್ಲಿ ಪೀಠ ಸ್ಥಾಪನೆಗೆ ಮಾತ್ರ ಒಪ್ಪಿಗೆ ನೀಡಿ ಬೆಳಗಾವಿ ಕೈಬಿಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷೃದಿಂದಲೇ ಬೆಳಗಾವಿ ಪೀಠ ಸ್ಥಾಪನೆ ಆಗುತ್ತಿಲ್ಲ. ಜಿಲ್ಲೆಯ ಸಚಿವರು, ಶಾಸಕರು ಸಂಪೂರ್ಣ ನಿರ್ಲಕ್ಷೃ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬೆಳಗಾವಿಗೆ ಬರಬೇಕಿದ್ದ ಹೈಕೋರ್ಟ್ ಪೀಠವನ್ನು ಧಾರವಾಡ ಜಿಲ್ಲೆಗೆ ನೀಡಿದ್ದರು. ಇದೀಗ ನಿರಂತರ ಹೋರಾಟದ ಫಲವಾಗಿ ಬೆಳಗಾವಿಗೆ ಬಂದಿರುವ ಗ್ರಾಹಕರ ಆಯೋಗದ ಪೀಠ ಸ್ಥಾಪನೆಗೆ ಸರ್ಕಾರ ಮುಂದಾಗುತ್ತಿಲ್ಲ. ಎಲ್ಲ ಕ್ಷೇತ್ರಗಳಲ್ಲಿ ಬೆಳಗಾವಿ ಜಿಲ್ಲೆಯನ್ನು ನಿರ್ಲಕ್ಷಿೃಸಿಕೊಂಡು ಬರುತ್ತಿರುವ ಸರ್ಕಾರ ಕೂಡಲೇ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ನ್ಯಾಯಾಲಯದ ಎಲ್ಲ ಕಲಾಪಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಕಲಬುರಗಿ ಜಿಲ್ಲೆಯ ಭಾಗದ ಜನಪ್ರತಿನಿಧಿಗಳ ಇಚ್ಛಾಶಕ್ತಿಯಿಂದಾಗಿ ನಿಗದಿತ ಸಮಯದಲ್ಲಿ ರಾಜ್ಯ ಗ್ರಾಹಕರ ಆಯೋಗ ಪೀಠ ಕಾರ್ಯಾರಂಭ ಮಾಡಿದೆ. ಆದರೆ, ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ, ನಿರ್ಲಕ್ಷೃದಿಂದಾಗಿ ಪೀಠ ಕಾರ್ಯಾರಂಭ ಮಾಡುತ್ತಿಲ್ಲ. ಸರ್ಕಾರವು ಕೂಡಲೇ ಪೀಠ ಆರಂಭಕ್ಕೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಪ್ರಭು ಯತ್ನಟ್ಟಿ, ಸುಧೀರ ಚೌಹಾಣ, ಮಹಾಂತೇಶ ಪಾಟೀಲ, ಆರ್.ಪಿ.ಪಾಟೀಲ, ಗಿರೀಶ ಎನ್. ಪಾಟೀಲ, ಬಸವರಾಜ ಮುಗಳಿ, ಬಸವರಾಜ ಯರಗಣವಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts