More

    ಪುಸ್ತಕಕ್ಕೆ ಸೀಮಿತವಾಗದೆ ಬದುಕಿನ ವೇದಿಕೆ ಸಿದ್ಧಪಡಿಸಿಕೊಳ್ಳಿ

    ಕೆ.ಆರ್.ಪೇಟೆ: ಕಲೆ, ಮತ್ತು ಸಾಂಸ್ಕೃತಿಕ ಚಟುವಟಿಕೆ ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗಗಳಾಗಿದ್ದು, ಯುವಜನರು ಕೇವಲ ಪುಸ್ತಕದ ಹುಳುಗಳಾಗದೆ ವಿವಿಧ ಕ್ಷೇತ್ರಗಳಲ್ಲಿ ಬದುಕು ರೂಪಿಸಿಕೊಳ್ಳಲು ಸೂಕ್ತ ವೇದಿಕೆಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಜಿಪಂ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಷ್ ಸಲಹೆ ನೀಡಿದರು.

    ತಾಲೂಕಿನ ಶೀಳನೆರೆ ಗ್ರಾಮದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪಿಯು ಹಂತ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಯ ಬಗ್ಗೆ ಒಲವು ರೂಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ದಕ್ಕುತ್ತವೆ. ವಿವಿಧ ಕ್ಷೇತ್ರಗಳಲ್ಲಿ ತಮ್ಮ ಕ್ರಿಯಾತ್ಮಕ ಚಟುವಟಿಕೆಯ ಮೂಲಕ ಗಮನಾರ್ಹ ಸಾಧನೆ ಮಾಡುವತ್ತ ಗಮನಹರಿಸಬೇಕು. ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ವಿಪುಲ ಅವಕಾಶಗಳಿದ್ದು ತಮ್ಮ ಕೌಶಲಗಳನ್ನು ಓರೆಗೆ ಹಚ್ಚುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಲು ಶ್ರಮವಹಿಸಬೇಕು ಎಂದರು.
    ತಾಲೂಕಿನ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts