More

    ಪೂರ್ಣ ಜಾರಿಯಾಗದ ಸಾಮಾಜಿಕ ನ್ಯಾಯ

    ಸಾಗರ: ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಪರಿಪೂರ್ಣವಾಗಿ ಜಾರಿಗೆ ಬಂದಿಲ್ಲ. ಸಾಮಾಜಿಕ ಪ್ರತ್ಯೇಕತೆ ದೂರವಾದಾಗ ಸಮ ಸಮಾಜ ನಿರ್ಮಾಣ ಆಗುತ್ತದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

    ಜು.2ರಂದು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ಡಿಜಿಟಲ್ ವೀಕ್ಷಣೆ ಹಿನ್ನೆಲೆಯಲ್ಲಿ ಸಾಗರದ ಗಾಂಧಿಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಭಾರತದ ಸಂವಿಧಾನ ಸಮಾನತೆ, ಸಮಾಜವಾದಿ ತತ್ವ ಮತ್ತು ಸಾಮಾಜಿಕ ನ್ಯಾಯಕ್ಕೆ ಅಡಿಪಾಯವಾಗಿದೆ. ಸಂವಿಧಾನ ಆಶಯದಂತೆ ಪ್ರತಿಯೊಬ್ಬ ಪ್ರಜೆಗೂ ಮೀಸಲಾತಿ, ಭೂಹೀನರಿಗೆ ಭೂಮಿಹಕ್ಕು, ವಸತಿ ಸಿಗಬೇಕು. ಇದು ಅನುಷ್ಠಾನಕ್ಕೆ ಬಂದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳ್ಳುತ್ತದೆ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಸದಾ ಪ್ರಯತ್ನಶೀಲವಾಗಿದೆ ಎಂದು ತಿಳಿಸಿದರು.

    ರಾಜ್ಯ ಕಾಂಗ್ರೆಸ್​ನಲ್ಲಿ ಮೊದಲ ಬಾರಿಗೆ ಇಂತಹ ಕಾರ್ಯಕ್ರಮವನ್ನು ಡಿ.ಕೆ.ಶಿವಕುಮಾರ್ ಪದಗ್ರಹಣದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದೆ. ಕರೊನಾ ಹಿನ್ನೆಲೆಯಲ್ಲಿ ಎಲ್ಲರೂ ಬೆಂಗಳೂರಿಗೆ ತೆರಳಿ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುವುದಿಲ್ಲ. ನಾವು ಇರುವಲ್ಲಿಯೇ ಪದಗ್ರಹಣ ಕಾರ್ಯಕ್ರಮವನ್ನು ಮೊಬೈಲ್, ಟಿವಿಯ ಮೂಲಕ ಪರೋಕ್ಷವಾಗಿ ಪಾಲ್ಗೊಳ್ಳಲು ಅವಕಾಶವಿದೆ ಎಂದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಪಕ್ಷ ಸದೃಢಗೊಳಿಸುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಉತ್ತೇಜನಕಾರಿಯಾಗಿದೆ. ಗ್ರಾಮ ಪಂಚಾಯಿತಿ, ಬೂತ್ ಮಟ್ಟದಲ್ಲಿನ ಮುಖಂಡರು, ಕಾರ್ಯಕರ್ತರು ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ಮೂಲಕ ನೇರವಾಗಿ ಪದಗ್ರಹಣದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

    ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಐ.ಎನ್.ಸುರೇಶ್ ಬಾಬು ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಜಾಲತಾಣದ ವೆಂಕಟೇಶ್ ಮೆಳವರಿಗೆ, ಸಂಜಯ್, ಸದ್ದಾಂ, ಪ್ರಮುಖರಾದ ಮಹಾಬಲ ಕೌತಿ, ರಮೇಶ್ ಮರಸ, ಭರ್ಮಪ್ಪ ಅಂದಾಸುರ, ಪ್ರಶಾಂತ್, ಪ್ರವೀಣ್ ಬಣಕಾರ್, ಅಬ್ದುಲ್ ಹಮೀದ್, ಕಿರಣ್ ದೊಡ್ಮನಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts