ಪೆಟ್ರೋಲ್ ಬಂಕ್‌ಗಳಲ್ಲಿ ಮೂಲಭೂತ ಸೌಲಭ್ಯಕ್ಕೆ ಒತ್ತಾಯ

5 ckm 6
ಚಿಕ್ಕಮಗಳೂರು ಎಡಿಸಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದ ಸಾರ್ವಜನಿಕರು ಪೆಟ್ರೋಲ್ ಬಂಕ್‌ಗಳಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಬಂಕ್ ಮಾಲೀಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಹೊಲದಗದ್ದೆ ಗಿರೀಶ್, ಟಿ.ಡಿ.ಮಲ್ಲೇಶ್, ರತೀಶ್ ಕುಮಾರ್, ಪುನೀತ್, ಲೋಕೇಶ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ನಗರದ ಪೆಟ್ರೋಲ್ ಬಂಕ್‌ಗಳಲ್ಲಿ ಮೂಲಭೂತ ಸೌಲಭ್ಯ ಹಾಗೂ ಶುಚಿತ್ವ ಕಾಪಾಡಲು ಬಂಕ್ ಮಾಲೀಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಹೊಲದಗದ್ದೆ ಗಿರೀಶ್, ನಗರ ಮತ್ತು ಜಿಲ್ಲೆಯಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ನಿಯಮಗಳ ಪ್ರಕಾರ ಗ್ರಾಹಕರಿಗೆ ಕನಿಷ್ಟ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಗರದ ಕೆ.ಎಂ.ರಸ್ತೆಯ ಕೆಲವು ಪೆಟ್ರೋಲ್ ಬಂಕ್‌ಗಳಲ್ಲಿ ಅಗತ್ಯ ಶೌಚಗೃಹ, ಕುಡಿಯುವ ನೀರು ಮತ್ತು ವಾಹನಕ್ಕೆ ಗಾಳಿ ತುಂಬುವ ವ್ಯವಸ್ಥೆಯಿಲ್ಲ. ಈ ಸಂಬAಧ ಪೆಟ್ರೋಲ್ ಬಂಕ್‌ನ ಸಿಬ್ಬಂದಿ ಹಾಗೂ ಮಾಲೀಕರಿಗೆ ವಿಚಾರಿಸಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದರ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಹೇಳಿದರು.

ದೂರದೂರಿನ ಪ್ರಯಾಣಿಕರು, ಸ್ಥಳೀಯರು ತುರ್ತು ಸಂದರ್ಭದಲ್ಲಿ ಪೆಟ್ರೋಲ್ ಬಂಕ್‌ನ ಶೌಚಗೃಹ ಬಳಸÀÄತ್ತಾರೆ. ಈ ಸಂಬAಧ ಬಂಕ್‌ನ ವ್ಯವಸ್ಥಾಪಕರು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಕರ್ತವ್ಯ. ಆದರೆ ಕೆಲವು ಬಂಕ್‌ಗಳಲ್ಲಿ ಯಾವುದೇ ರೀತಿಯ ವ್ಯವಸ್ಥೆಯಿಲ್ಲದೇ ಕಾಟಾಚಾರಕ್ಕೆ ಬಂಕ್ ನಡೆಸುವಂತಾಗಿದೆ ಎಂದು ತಿಳಿಸಿದರು.

ಪೆಟ್ರೋಲಿಯಂ ದರವು ಪ್ರತಿದಿನವು ವ್ಯತ್ಯಾಸವಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತಿಳಿಯುವಂತೆ ಡಿಜಿಟಲ್ ಬೋರ್ಡಿನಲ್ಲಿ ಕೆಲವು ಬಂಕ್‌ಗಳು ದರ ಪ್ರಕಟಿಸುತ್ತಿಲ್ಲ. ಶೌಚಗೃಹಗಳು ಇದ್ದರೂ ಶುಚಿತ್ವದಿಂದ ಕೂಡಿಲ್ಲ. ಹೀಗಾಗಿ ಪೆಟ್ರೋಲ್ ಬಂಕ್‌ಗಳ ಸಂಘಕ್ಕೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಡಳಿತ ಮುಂದಾಗದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಟಿ.ಡಿ.ಮಲ್ಲೇಶ್, ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ರತೀಶ್ ಕುಮಾರ್, ವಿಎಸ್‌ಎಸ್‌ಎನ್ ನಿರ್ದೇಶಕ ಪುನೀತ್, ಬಸ್ ಮಾಲೀಕರ ಸಂಘದ ನಿರ್ದೇಶಕ ಲೋಕೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net