More

    ಪೆನ್‌ಡ್ರೈವ್‌ ಪ್ರಕರಣ: ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ನೋಟಿಸ್​!

    ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸಗಿದರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಈಗಾಗಲೇ ವಿಚಾರಣೆಯ ಹಂತದಲ್ಲಿದ್ದು, ಇದೀಗ ರೇವಣ್ಣ ಪತ್ನಿ ಭವಾನಿ ರೇವಣ್ಣಗೂ ವಿಶೇಷ ತನಿಖಾ ತಂಡ ನೋಟಿಸ್ ರವಾನಿಸಿ ಶನಿವಾರದ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ.

    ಇದನ್ನೂ ಓದಿ: ಸೀಮಂತ ಕಾರ್ಯಕ್ಕೆ ತೆರಳುತ್ತಿದ್ದ 7 ತಿಂಗಳ ಗರ್ಭಿಣಿ ರೈಲಿನಿಂದ ಬಿದ್ದು ಸಾವು

    ಮಾಜಿ ಸಚಿವ ಎಚ್‌.ಡಿ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ ಬೆಂಗಳೂರು ಮತ್ತು ಹಾಸನದ ಮನೆ ಮತ್ತು ಫಾರ್ಮ್ ಹೌಸಗಳಲ್ಲಿ ದಾಳಿ ಮಾಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ.

    ಇಂದು ಬೆಳ್ಳಂಬೆಳಿಗ್ಗೆ ಪ್ರಜ್ವಲ್ ತೋಟದ ಮನೆಗೆ ಎಸ್ಐಟಿ ಅಧಿಕಾರಿಗಳ ತಂಡ ರೇಡ್ ಮಾಡಿದ್ದು, ಐದು ಜನರ ತಂಡದಿಂದ ಹಾಸನ ಪಡುವಲಹಿಪ್ಪೆಯ ತೋಟದ ಮನೆಯಲ್ಲಿ ಪರಿಶೀಲನೆ ನಡೆದಿದೆ. ಮುಂಜಾನೆ 3.30ರ ಸುಮಾರಿನಲ್ಲೇ ಬಂದು ಪರಿಶೀಲನೆ ನಡೆಸಿರುವ ಬಗ್ಗೆ ಮಾಹಿತಿ ಇದೆ.

    ಈ ಪ್ರಕರಣ ಸಂಬಂಧ ಎಸ್.ಪಿ. ಸೀಮಾ ಲಾಠ್ಕರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ರೇವಣ್ಣ ಅವರ ಫಾರ್ಮ್‌ಹೌಸ್‌ನಲ್ಲಿದ್ದ ಕಾರ್ಮಿಕರನ್ನೂ ವಿಚಾರಣೆಗೆ ಒಳಪಡಿಸಿದೆ ಎಂದು ವರದಿಯಾಗಿದೆ.

    ಸೋಲುವ ಭೀತಿಯಿಂದ ರಾಹುಲ್ ಅಮೇಠಿಯಿಂದ​ ಪಲಾಯನ ಮಾಡಿದ್ದಾರೆ: ಸ್ಮೃತಿ ಇರಾನಿ ಟೀಕೆ

    ನಮ್ಮ ಕುಟುಂಬದ ಕರ್ಮಭೂಮಿಗೆ ಸೇವೆ ಸಲ್ಲಿಸುವ ಪುಣ್ಯ ಸಿಕ್ಕಿದೆ: ರಾಹುಲ್ ಗಾಂಧಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts