More

    ಪೆನ್ ಡ್ರೈವ್ ಹಂಚಿದ ಮಹಾನ್ ನಾಯಕ ಯಾರು?

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ
    ಸಂಸದ ಪ್ರಜ್ವಲ ರೇವಣ್ಣ ಪ್ರಕರಣದಿಂದ ನಾವು ಪಲಾಯನ ಮಾಡುವುದಿಲ್ಲ. ಪ್ರಕರಣದ ತನಿಖೆ ನಡೆಸುವುದರ ಜತೆಗೆ ಅಶ್ಲೀಲ ವಿಡಿಯೋಗಳನ್ನು ಪೆನ್ ಡ್ರೈವ್ ಹಂಚಿದ ಮಹಾನ್ ನಾಯಕ ಯಾರು ಎಂಬುದರ ಬಗ್ಗೆಯೂ ತನಿಖೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆಗ್ರಹಿಸಿದರು.

    ಮಂಗಳವಾರ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಜೆಡಿಎಸ್ ಕೋರ ಕಮಿಟಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪ್ರಜ್ವಲ ರೇವಣ್ಣ ಆರೋಪಿ ಸ್ಥಾನದಲ್ಲಿ ಇದ್ದಾರೆ. ಇದರಲ್ಲಿ ಸತ್ಯಾಸತ್ಯತೆ ಹೊರಬರುವುದು ಒಂದು ಭಾಗವಾದರೆ, ಯಾವ ಕಾರಣಕ್ಕಾಗಿ ಪೆನ್ ಡ್ರೈವ್ ಸರಕ್ಯೂಲೇಟ್ ಮಾಡಿದರೂ ಎಂಬುದು ರಾಜ್ಯದ ಜನತೆಗೆ ತಿಳಿಯಬೇಕಿದೆ ಎಂದರು.

    ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕರ್ತರ ಪೆನ್ ಡ್ರೈವ್ ಹಂಚಿ ನೂರಾರು ಮಹಿಳೆಯರ ಮಾನವನ್ನು ಬೀದಿಗೆ ತಂದಿದ್ದಾರೆ. ಮಹಿಳೆಯರ ಮಾನ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಅಲ್ಲವೇ ಎಂದು ಪ್ರಶ್ನಿಸಿದರು.
    ನಮ್ಮ ಶಕ್ತಿ ಸಣ್ಣದಿರಬಹುದು ಅಥವಾ ದೊಡ್ಡದಿರಬಹುದು. ಎಲ್ಲ 14 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುವ ಬಗ್ಗೆ ಕೋರ್ ಕಮಿಟಿ ಸಭೆ‌ ನಡೆಸುತ್ತಿದ್ದೇವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts