More

    ‘ಪೊರಕೆಯೇ ಪರಿಹಾರ’ ಅಭಿಯಾನ, ಆಪ್​ನಿಂದ 24ಕ್ಕೆ ಪೂರ್ವ, ಸೆಂಟ್ರಲ್ ಕ್ಷೇತ್ರದಲ್ಲಿ ಜಾಗೃತಿ ಕಾರ್ಯಕ್ರಮ

    ಹುಬ್ಬಳ್ಳಿ: ಕರ್ನಾಟಕವನ್ನು ಸದೃಢವಾಗಿ ಕಟ್ಟುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪೊರಕೆಯೇ ಪರಿಹಾರ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಫೆ. 24ರಂದು ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಆಪ್ ಮುಖಂಡ ವಿಕಾಸ ಸೊಪ್ಪಿನ್ ತಿಳಿಸಿದರು.

    ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಂಬೇಡ್ಕರ್ ವೃತ್ತದಿಂದ ಅಂದು ಬೆಳಗ್ಗೆ 10ಕ್ಕೆ ಅಭಿಯಾನ ಆರಂಭವಾಗಲಿದೆ. ಪಕ್ಷದ ಕಾರ್ಯಾಧ್ಯಕ್ಷ ರವಿಚಂದ್ರ ನೆರಬೆಂಚಿ ಉದ್ಘಾಟನೆ ನೆರವೇರಿಸುವರು. ಪೂರ್ವ ಕ್ಷೇತ್ರದ 7 ಸ್ಥಳಗಳಲ್ಲಿ ಸಾರ್ವಜನಿಕ ಸಭೆ ನಡೆಸಿ, ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳ ಬಗ್ಗೆ ತಿಳಿವಳಿಕೆ ನೀಡಲಾಗುವುದು. ಫೆ. 25ರಂದು ಸೆಂಟ್ರಲ್ ಕ್ಷೇತ್ರದಲ್ಲಿ ಅಭಿಯಾನ ನಡೆಯಲಿದೆ ಎಂದರು.

    ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿ ಸರ್ಕಾರ ಕೈಗೊಂಡ ಬಿಆರ್​ಟಿಎಸ್, ಸ್ಮಾರ್ಟ್ ಸಿಟಿ ಯೋಜನೆಗಳು ವಿಫಲಗೊಂಡಿವೆ. ಅರ್ಧಂಬರ್ಧ ಕಾಮಗಾರಿಯಿಂದ ಜನರು ರೋಸಿ ಹೋಗಿದ್ದಾರೆ. ಸ್ವತಃ ಕೇಂದ್ರ ಸಚಿವರೇ ಸ್ಮಾರ್ಟ್ ಸಿಟಿ ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಮ್ಮ ಪಕ್ಷದ ಮೊಹಲ್ಲಾ ಕ್ಲಿನಿಕ್ ಮಾದರಿಯಲ್ಲಿ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಮಾಡಿದರು ಸಮರ್ಪಕವಾಗಿ ಜಾರಿ ಮಾಡಿಲ್ಲ. ಇಂತಹ ಲೋಪಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುವುದು ಎಂದರು.

    ಆಪ್ ಪಕ್ಷದ ಇಂತಹ ಹಲವು ಯೋಜನೆಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಕಾಪಿ ಮಾಡುತ್ತಿವೆ. ಕಾಂಗ್ರೆಸ್​ನವರು ಅಧಿಕಾರದಲ್ಲಿರುವ ರಾಜ್ಯದಲ್ಲಿ ಬಿಟ್ಟು ಕರ್ನಾಟಕದಲ್ಲಿ ಉಚಿತ ವಿದ್ಯುತ್ ಬಗ್ಗೆ ಮಾತನಾಡುತ್ತಿದ್ದಾರೆ. ಅಂದರೆ ಇದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಟೀಕಿಸಿದರು.

    ಈ ಎಲ್ಲ ವಿಷಯಗಳ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಲು ಅಭಿಯಾನ ನಡೆಸಲಾಗುವುದು ಎಂದರು. ಪೂರ್ವ ಕ್ಷೇತ್ರದ ಆಕಾಂಕ್ಷಿ ಬಸವರಾಜ ತೇರದಾಳ, ಧಾರವಾಡ ಜಿಲ್ಲಾಧ್ಯಕ್ಷ ಅನಂತಕುಮಾರ ಬುಗಡಿ, ಮಲ್ಲಪ್ಪ ತಡಸದ, ಶ್ರೀರಂಗ ದೇಸಾಯಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts