More

    ಪೊಲೀಸರ ಕರ್ತವ್ಯ ಸ್ಮರಣಿಯ


    ಯಾದಗಿರಿ: ಕೋವಿಡ್, ಪ್ರವಾಹ ಸಂದರ್ಭಲ್ಲಿ ಪೊಲೀಸರು ಸಲ್ಲಿಸಿದ ಕರ್ತವ್ಯ ಸೇವೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಬಣ್ಣಿಸಿದರ

    ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ಹಾಗೂ ನೆರೆ ಪ್ರವಾಹ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಯಾವ ರೀತಿಯಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು, ಯಾವ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಬೇಕು? ಎಂಬುದಾಗಿ ಪೊಲೀಸರು ಯೋಚನೆ ಮಾಡುತ್ತಾರೆ. ಆದ್ದರಿಂದ ಸಾರ್ವಜನಿಕರು ಕೂಡ ಕಾನೂನು ಪಾಲನೆ ಮಾಡುವ ಮೂಲಕ ಪೊಲೀಸರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.

    ಪೊಲೀಸರು ಎಂತಹ ಕಠಿಣ ಪ್ರಕರಣವನ್ನು ಕೂಡ ಬೇಧಿಸುತ್ತಾರೆ. ಸಮಾಜದಲ್ಲಿ ಶಾಂತಿ ನೆಲೆಸಲು ಕಾರಣರಾಗಿರುವ ಪೊಲೀಸರನ್ನು ರಾಷ್ಟ್ರ ಲಾಂಛನದಲ್ಲಿರುವ ಕಣ್ಣಿಗೆ ಕಾಣಿಸದ 4ನೇ ಸಿಂಹಕ್ಕೆ ಹೋಲಿಸಲಾಗುತ್ತದೆ ಎಂದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಮಾತನಾಡಿ, ದೇಶದಲ್ಲಿ ಆಂತರಿಕ ಶತ್ರುಗಳು ಹಾಗೂ ದೇಶ ವಿರೋಧಿ ಕೃತ್ಯಗಳನ್ನೆಸಗುವ ದುಷ್ಟರ ವಿರುದ್ಧ ಧೀರತನದಿಂದ ಹೋರಾಡಿ ಪ್ರಾಣವನ್ನು ಸಪರ್ಪಿಸಿದ ಪೊಲೀಸ್ ಯೋಧರಿಗೆ ಶ್ರದ್ಧಾಂಜಲಿಯನ್ನುಅರ್ಪಸುವುದರ ಮೂಲಕ ಈ ದಿನ ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದರು. ಡಿವೈಎಸ್ಪಿ ವೆಂಕಟೆಶ ಉಗಿಬಂಡಿ ಇತರರು ಇದ್ದರು. ಪೊಲೀಸ್ ಹುತಾತ್ಮರ ಗೌರವ ಸೂಚಕವಾಗಿ ಪರೇಡ್ ಕಮಾಂಡರ್ ಆರ್ಎಸ್ಐ ಚಂದ್ರಶೇಖರ ಅವರ ನೇತೃತ್ವದಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ ನಂತರ ಮೌನಾಚರಣೆ ಮಾಡಲಾಯಿತು. ಕಾನ್ಸ್ಟೆಬಲ್ ಸಂತೋಷ ಎಂ. ಜಯಕರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts