ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿಗೆ ನ.29ರಂದು ಲಿಖಿತ ಪರೀಕ್ಷೆ

Police
Published on

ಬೆಂಗಳೂರು : ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೇಬಲ್(ಬ್ಯಾಂಡ್ಸ್ ಮೆನ್) ಹುದ್ದೆಗಳ ನೇಮಕಾತಿಗೆ ನ.29ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ಬೆಂಗಳೂರು ನಗರದಲ್ಲಿನ 36 ಪರೀಕ್ಷಾ ಕೇಂದ್ರದಲ್ಲಿ 5,880 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳ್ಳಗೆ 11 ಗಂಟೆಯಿಂದ ಮಧ್ಯಾಹ್ನ 12.30ವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್ www.ksp.gov.in ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಅರ್ಹ ಅಭ್ಯರ್ಥಿಗಳು ಕರ ಪತ್ರವನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ನಲ್ಲಿ ವೀಕ್ಷಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net