More

    ಪೋಕ್ಸೋ ಕಾಯ್ದೆ ಕುರಿತು ಅರಿವು ಅಗತ್ಯ

    ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣ ಹೆಚ್ಚುತ್ತಿದ್ದು, ಪೋಕ್ಸೋ ಕಾಯ್ದೆ ಕುರಿತು ಮಹಿಳೆಯರಲ್ಲಿ ಅರಿವಿರಬೇಕು ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕಿ ಮಹದೇವಿ ಎಂ.ಮರಕಟ್ಟಿ ಸಲಹೆ ನೀಡಿದರು.

    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತರಾಸು ರಂಗಮಂದಿರದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

    ಶಾಲಾ-ಕಾಲೇಜುಗಳಿಗೆ ತೆರಳುವ 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ವಿಶೇಷ ನಿಗಾ ಇರಿಸಿ, ಮುಂದಾಗುವ ಲೈಂಗಿಕ ದೌರ್ಜನ್ಯ, ಕೊಲೆಯಂತಹ ಅನಾಹುತ ತಪ್ಪಿಸುವಲ್ಲಿ ತಾಯಂದಿರ ಪಾತ್ರ ಮುಖ್ಯ ಎಂದು ಕಿವಿಮಾತು ಹೇಳಿದರು.

    ನಗರಸಭೆ ಸದಸ್ಯರಾದ ಶ್ರೀದೇವಿ ಚಕ್ರವರ್ತಿ, ಪಿ.ಕೆ.ಮೀನಾಕ್ಷಿ, ವೀಣಾ, ಟ್ರಸ್ಟ್ ಪ್ರಾದೇಶಿಕ ನಿರ್ದೇಶಕಿ ಬಿ.ಗೀತಾ, ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಕೆ.ಆರ್.ಮಂಜುನಾಥ್, ಸದಸ್ಯರಾದ ರೂಪಾ ಜನಾರ್ಧನ್, ನಾಗರಾಜ್ ಸಂಗಂ, ಕಿರಣ್‌ಶಂಕರ್, ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್‌ಪೂಜಾರಿ, ತಾಲೂಕು ಯೋಜನಾಧಿಕಾರಿ ಬಿ.ಅಶೋಕ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಧಾ, ವಲಯ ಮೇಲ್ವಿಚಾರಕ ಸಂದೀಪ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts