More

    ಪೋಲಿಯೋ ನಿರ್ಮೂಲನೆಗೆ ಸಹಕರಿಸಿ, ತಹಸೀಲ್ದಾರ್ ಮಹೇಶ್ ಕುಮಾರ್ ಮನವಿ, 27ರಿಂದ ಲಸಿಕಾ ಅಭಿಯಾನ

    ಹೊಸಕೋಟೆ: ಪೋಲಿಯೋ ನಿರ್ಮೂಲನೆಗೆ ಆರೋಗ್ಯ ಇಲಾಖೆ ಜತೆ ಎಲ್ಲ ಇಲಾಖೆ ಹಾಗೂ ಸ್ವಯಂ ಸೇವಾ ಸಂಘಟನೆಗಳು ಕೈ ಜೋಡಿಸಿ ಪೋಲಿಯೋಮುಕ್ತ ದೇಶವನ್ನಾಗಿಸಲು ಸಹಕರಿಸಬೇಕು ಎಂದು ತಹಸೀಲ್ದಾರ್ ಮಹೇಶ್ ಕುಮಾರ್ ತಿಳಿಸಿದರು.

    ನಗರದ ತಾಲೂಕು ಕಚೇರಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಗುರುವಾರ ಕರೆದಿದ್ದ ಟಾಸ್ಕ್ ೆರ್ಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

    ೆ.27, 28 ಮತ್ತು ಮಾ.1 ಮತ್ತು 2ರಂದು ಪಲ್ಸ್ ಪೋಲಿಯೋ ಅಭಿಯಾನ ಆಯೋಜಿಸಿದ್ದು, ನಗರಸಭೆ ವ್ಯಾಪ್ತಿಯಲ್ಲಿ ನಗರಸಭೆ ಆಯುಕ್ತರಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದ್ದು, ನಗರದ ಪ್ರತಿ ವಾರ್ಡ್‌ನಲ್ಲಿ ಸಂಚರಿಸುವ ಕಸ ಸಂಗ್ರಹ ವಾಹನದ ಮೈಕ್‌ಗಳಲ್ಲಿ ಪೋಲಿಯೋ ನಿಯಂತ್ರಣದ ಸಂದೇಶ ಪ್ರಸರಣ ಮಾಡುವ ಮೂಲಕ ಅರಿವು ಮೂಡಿಸಬೇಕು ಎಂದರು.

    ಪಂಚಾಯಿತಿಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳ ನೆರವಿನೊಂದಿಗೆ ಅಭಿಯಾಣ ಯಶಸ್ವಿಗೆ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಇಒಗೆ ತಿಳಿಸಿದರು.

    ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಲ್ಲಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಸುಂಕವಸೂಲಾತಿ ಕೇಂದ್ರದ ಸಹಕರಿಸಬೇಕು. ತಾಲೂಕಿನ ಎಲ್ಲ ಶಾಲೆಗಳಲ್ಲಿ ಜಾಥಾ ಆಯೋಜಿಸಿ ಪೋಲಿಯೋ ಲಸಿಕೆ ಬಗ್ಗೆ ಅರಿವು ಮೂಡಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವಿವೇಕಾನಂದರಿಗೆ ತಿಳಿಸಿದರು.

    ತಾಲೂಕು ಆರೋಗ್ಯಾಧಿಕಾರಿ ವೀಣಾ ಮಾತನಾಡಿ, ತಾಲೂಕಿನಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ 29,584 ಮಕ್ಕಳಿದ್ದು, ಲಸಿಕೆ ಹಾಕಲು ತಾಲೂಕಿನಾದ್ಯಂತ 114 ಬೂತ್ ವ್ಯವಸ್ಥೆ ಮಾಡಿಕೊಂಡಿದ್ದು, 456 ಲಸಿಕಾದಾರರು, 25 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.

    ಸಮಾಜ ಕಲ್ಯಾಣಾಧಿಕಾರಿ ಶಿವಲಿಂಗಯ್ಯ, ನಗರಸಭೆ ಆರೋಗ್ಯ ಇಲಾಖಾ ಅಧಿಕಾರಿ ಬಾಲು, ಹಿರಿಯ ಆರೋಗ್ಯಾಧಿಕಾರಿ ಗುರುರಾಜ್ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts