More

    ಪೌರಕಾರ್ಮಿಕರುಗೆ ಪುನರ್ವಸತಿ ಕಲ್ಪಿಸಲು ಕ್ರಮ

    ಚಾಮರಾಜನಗರ: ರಾಜ್ಯದಲ್ಲಿರುವ ಮ್ಯಾನುಯಲ್ ಸ್ಕಾೃವೆಂಜರ್‌ಗಳಿಗೆ ಪುನರ್ವಸತಿ ಕಲ್ಪಿಸಲು ಕ್ರಮವಹಿಸಲಾಗಿದೆ ಎಂದು ಸಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ತಿಳಿಸಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಒಟ್ಟು 90 ಜನ ಮ್ಯಾನುವೆಲ್ ಸ್ಕಾೃವೆಂಜರ್‌ಗಳು ಮೃತಪಟ್ಟಿದ್ದಾರೆ. ಈ ಕೆಲಸ ಮಾಡಿಸುವವರ ವಿರುದ್ಧ ಕಾನೂನು ಕ್ರಮ ಜರುಗಲಿದ್ದು, ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತಿದೆ ಎಂದು ಹೇಳಿದರು.
    ಪಂಚಾಯಿತಿ, ನಗರಸಭೆ, ಬಿಬಿಎಂಪಿಗಳಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಸಂಖ್ಯೆ ತಿಳಿದಿದೆ. ಆದರೆ ಆಸ್ಪತ್ರೆ, ಮಾಲ್‌ಗಳು, ಕೈಗಾರಿಕೆಗಳನ್ನು ಕೆಲಸ ಮಾಡುವ ಮ್ಯಾನುವೆಲ್ ಸ್ಕಾೃವೆಂಜರ್‌ಗಳು ಎಷ್ಟು ಜನ ಇದ್ದಾರೆ ಎನ್ನುವುದು ತಿಳಿಯುತ್ತಿಲ್ಲ. ಪೌರಕಾರ್ಮಿಕರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ವರದಿ ಸಲ್ಲಿಸಿದ್ಧೇನೆ. ಸಾಲಪ್ಪ ವರದಿ, ನ್ಯಾಷನಲ್ ಸ್ಕೂಲ್ ಆ್ ಲಾ ವರದಿ, ಚಂದ್ರಶೇಖರ್ ವರದಿ ಇವೆಲ್ಲವನ್ನೂ ಓದಿ ಪ್ರಮುಖ ಅಂಶಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗಿದೆ ಎಂದರು.
    ಪೌರಕಾರ್ಮಿಕರ ನೇಮಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಪೌರಕಾರ್ಮಿಕರು ಕೆಲವು ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದ ವೇಳೆ ಸಂಘಟನೆ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಿದೆ. ರಾಜ್ಯದಲ್ಲಿರುವ ಎಲ್ಲ ಮಹಿಳಾ ಪೌರಕಾರ್ಮಿಕರಿಗಾಗಿ ವಿಶ್ರಾಂತಿ ಕೊಠಡಿ ನಿರ್ಮಾಣ ಮಾಡಬೇಕಿದೆ. ಮನೆ ಇಲ್ಲದವರಿಗೆ ನಿವೇಶನ, ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ವಿವರಿಸಿದರು.
    ಪೌರಕಾರ್ಮಿಕರು ಸುರಕ್ಷತಾ ಸಾಮಗ್ರಿಗಳನ್ನು ಧರಿಸಿ ಕೆಲಸ ಮಾಡಲು ಅನುಕೂಲ ಮಾಡಿಕೊಡಲು ಒಡಿಶಾ ಮಾದರಿಯನ್ನು ಅನುಸರಿಸಲಾಗುತ್ತಿದೆ. ಅಧ್ಯಯನ ನಡೆಸಿ ಕಾರ್ಮಿಕರ ಅಗತ್ಯತೆಗೆ ತಕ್ಕಂತೆ ಸುರಕ್ಷತಾ ಸಾಮಗ್ರಿ ನೀಡಲಾಗುವುದು. ಇದಕ್ಕಾಗಿ ಟೆಂಡರ್ ಕರೆಯಲಾಗಿದೆ. ಪ್ರತಿದಿನ ಕಸದ ವಾಸನೆ ಕುಡಿದು ಕೆಲಸ ಮಾಡುವುದರಿಂದ ಪೌರಕಾರ್ಮಿಕರ ಆಯಸ್ಸು ಕ್ಷೀಣಿಸುತ್ತಿದೆ. ಹಾಗಾಗಿ, ಆರೋಗ್ಯಾಧಿಕಾರಿಗಳು ಕಡ್ಡಾಯವಾಗಿ ಆರೋಗ್ಯ ಪರೀಕ್ಷೆ ಮಾಡಬೇಕೆಂದು ತಿಳಿಸಿರುವುದಾಗಿ ಹೇಳಿದರು.
    ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿರುವ ಪೌರಕಾರ್ಮಿಕರ ಮಕ್ಕಳಿಗೆ ಮೈಸೂರಿನಲ್ಲಿ ಪ್ರತಿಭಾ ಪುರಸ್ಕಾರ ಮಾಡಿ ಸನ್ಮಾನಿಸಲಾಗುವುದು. ಪೌರಕಾರ್ಮಿಕರಿಗೆ ಪ್ರತಿಯೊಬ್ಬರೂ ಗೌರವ ಕೊಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಪೌರಕಾರ್ಮಿಕರ ಪಾದ ಪೂಜೆ ಮಾಡಿದ್ದಾರೆ ಎಂದರು.ರಾಜ್ಯ ಸಾರಿ ಕರ್ಮಚಾರಿ ಸಂಶೋಧನಾಕಾರಿ ಸುವರ್ಣಬಾಗಿ, ಸಾಯಿ ಕರ್ಮಚಾರಿ ಆಯೋಗದ ಸದಸ್ಯೆ ಪುಷ್ಪಾ, ಭಾಗ್ಯ, ಮುಖಂಡರಾದ ರಾಜಶೇಖರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts