ಪೌರ ಕಾರ್ಮಿಕರ ಸಮಸ್ಯೆ ತಾಲೂಕು ಮಟ್ಟದಲ್ಲೇ ಪರಿಹರಿಸಲು ಸೂಚನೆ

25 ckm 5
ಚಿಕ್ಕಮಗಳೂರು ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಮ್ಯಾನುಯಲ್ ಸ್ಕಾö್ಯವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ ೨೦೧೩ ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸಭೆಯನ್ನುz್ದೆÃಶಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿದರು.
Published on

ಚಿಕ್ಕಮಗಳೂರು: ಪೌರ ಕಾರ್ಮಿಕರ ಸಮಸ್ಯೆಯನ್ನು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಪರಿಹರಿಸಲು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮ್ಯಾನುಯಲ್ ಸ್ಕಾö್ಯವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ ೨೦೧೩ ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೌರ ಕಾರ್ಮಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಅವರಿಗೆ ಸವಲತ್ತುಗಳನ್ನು ಕಲ್ಪಿಸುವತ್ತ ಗಮನ ಹರಿಸಬೇಕು. ಸರ್ಕಾರ ಪೌರ ಕಾರ್ಮಿಕರಿಗಾಗಿ ನೀಡಿರುವ ಸವಲತ್ತುಗಳನ್ನು ಕೊಡುವಲ್ಲಿ ಅಧಿಕಾರಿಗಳು ವಿಳಂಬ ಮಾಡಬಾರದು ಎಂದರು.

ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಬೇಕು. ಗುರುತಿನ ಚೀಟಿಯನ್ನು ಕಡ್ಡಾಯವಾಗಿ ನೀಡಬೇಕು. ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾದ ವಿಶ್ರಾಂತಿ ಗೃಹಗಳನ್ನು ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಮಾಡಬೇಕಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಕೂಡ ಅವರಿಗೆ ವಿಶ್ರಾಂತಿ ಗೃಹಗಳನ್ನು ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಸ ಸಂಗ್ರಹಣೆಗಾಗಿ ಬರುವ ಪೌರ ಕಾರ್ಮಿಕರಿಗೆ ಕಡಿಮೆ ವೇತನ ನೀಡಲಾಗುತ್ತಿದ್ದು, ಕನಿಷ್ಠ ವೇತನವನ್ನಾದರೂ ನೀಡುವಂತೆ ಸಮಿತಿಯ ಸದಸ್ಯರಾದ ವೆಂಕಟೇಶ್ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಈ ಮೊದಲು ಕಸ ಸಂಗ್ರಹಣೆಗೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಅವಧಿ ಇನ್ನೂ ಒಂದು ತಿಂಗಳಲ್ಲಿ ಮುಗಿಯುತ್ತದೆ. ನಂತರ ಈ ಕುರಿತು ಕ್ರಮ ವಹಿಸುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಿದರು.

ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ವೇತನ ಪಾವತಿಸಲು ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದ ಡಿಸಿ, ಪೌರ ಕಾರ್ಮಿಕರಿಗೆ ರಜೆ ಮಂಜೂರು ಮಾಡಲು ಸಂಬAಧಿಸಿದ ತಾಲೂಕು ವೈದ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಲತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net