More

    ಪೌರ ಕಾರ್ವಿುಕರಿಗೆ ಸವಲತ್ತು ತಲುಪಿಸಿ


    ಹುಬ್ಬಳ್ಳಿ: ಪೌರ ಕಾರ್ವಿುಕರಿಗೆ ಸರ್ಕಾರದ ಸವಲತ್ತುಗಳನ್ನು ಅಧಿಕಾರಿಗಳು ಸಮರ್ಪಕವಾಗಿ ತಲುಪಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಕೋಟೆ ಹೇಳಿದರು.
    ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಮಹಾನಗರ ಪಾಲಿಕೆ ಪೌರ ಕಾರ್ವಿುಕರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರು ಮಾತನಾಡಿದರು. ಪೌರ ಕಾರ್ವಿುಕರ ಹಿತರಕ್ಷಣೆ ಮುಖ್ಯ. ಅವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಇನ್ನಷ್ಟು ಸುಧಾರಣೆಗಳಾಗಬೇಕು. ಪೌರ ಕಾರ್ವಿುಕರ ಬ್ಯಾಂಕ್ ಪಾಸ್​ಬುಕ್ ಹಾಗೂ ಎಟಿಎಂ ಕಾರ್ಡ್​ಗಳನ್ನು ಗುತ್ತಿಗೆದಾರರು ತೆಗೆದುಕೊಳ್ಳಬಾರದು. ಗುತ್ತಿಗೆ ಆಧಾರಿತ ಕಾರ್ವಿುಕರಿಗೆ ನೇರ ವೇತನ ಪಾವತಿಸಬೇಕು ಎಂದು ಸೂಚಿಸಿದರು.
    ಈಗಾಗಲೇ ನಿಧನ ಹೊಂದಿದ 7 ಪೌರ ಕಾರ್ವಿುಕರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು. ನಿತ್ಯದ ಕೆಲಸದಿಂದ ಆರೋಗ್ಯದ ಮೇಲೆ ಪರಿಣಾಮಗಳಾಗುತ್ತವೆ. ಜೀವಿತಾವಧಿ ಇಳಿಮುಖವಾಗುತ್ತದೆ. ಆರೋಗ್ಯದ ಹಿತದೃಷ್ಟಿಯಿಂದ ಮಾಸ್ಕ್, ಬೂಟು, ಗ್ಲೌಸ್, ರೇನ್​ಕೋಟ್, ಸಮವಸ್ತ್ರ, ವೈದ್ಯಕೀಯ ಕಿಟ್ ಮತ್ತಿತರ ಸಾಮಗ್ರಿಗಳನ್ನು ಒದಗಿಸಬೇಕು ಎಂದು ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿದರು.
    ಮಹಾನಗರಪಾಲಿಕೆ ಆಯುಕ್ತ ಡಾ.ಬಿ. ಗೋಪಾಲಕೃಷ್ಣ ಮಾತನಾಡಿ, ಜೆ.ಸಿ. ನಗರದ ವಲಯ ಕಚೇರಿ 8ರಲ್ಲಿ ಪೌರ ಕಾರ್ವಿುಕರಿಗೆ ವಿಶ್ರಾಂತಿ ಕೊಠಡಿ ನಿರ್ವಿುಸಲಾಗಿದೆ. ಉಳಿದ ಕಡೆಗಳಲ್ಲಿಯೂ ವಿಶ್ರಾಂತಿ ಗೃಹಗಳು ನಿರ್ವಣವಾಗಲಿವೆ ಎಂದರು.
    ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪ್ರಿಯದರ್ಶಿನಿ ಎಚ್., ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
    ಪೌರ ಕಾರ್ವಿುಕರಿಗೆ ಮಾಸ್ಕ್, ಬೂಟು, ಗ್ಲೌಸ್ ವಿತರಿಸಲಾಯಿತು. ಆಯೋಗದ ಕಾರ್ಯದರ್ಶಿ ಚಂದ್ರಕಲಾ, ಸದಸ್ಯ ಕೆ.ಪಿ. ವೆಂಕಟೇಶ, ಸಫಾಯಿ ಕರ್ಮಚಾರಿಗಳ ರಾಜ್ಯ ಪರಿಷತ್ ಅಧ್ಯಕ್ಷ ಜಗದೀಶ ಹಿರೇಮನಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಡೊಂಬರ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯರಾದ ರೇಣುಕಪ್ಪ ಕೇಲೂರ, ವಿದ್ಯಾ ನರಸಪ್ಪನವರ, ಹನುಮಂತಪ್ಪ ಮಾಲಪಲ್ಲಿ, ಭೀಮರಾವ ಸವಣೂರ, ಕಾರ್ವಿುಕ ಇಲಾಖೆಯ ಲಲಿತಾ ಸಾತೇನಹಳ್ಳಿ, ತಹಸೀಲ್ದಾರ್ ಜಿ.ವಿ. ಪಾಟೀಲ, ಎಚ್.ಎ. ಕೊಚ್ಚರಗಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts