More

    ಪೌಷ್ಟಿಕ ಆಹಾರದಿಂದ ಆರೋಗ್ಯವಂತ ಮಗು

    ಬಂಕಾಪುರ: ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವುದರಿಂದ ಸರಳ ಹೆರಿಗೆಯ ಜೊತೆಗೆ ಆರೋಗ್ಯವಂತ ಮಗುವನ್ನು ಪಡೆಯಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ ಹೇಳಿದರು.

    ಪಟ್ಟಣದ ಆಸಾರ ಮೊಹಲ್ಲಾದ 63ನೇ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ತಾಲೂಕು ಶಿಶು ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಪೌಷ್ಟಿಕ ಆಹಾರ ಸಪ್ತಾಹ, ಪೊಷಣೆ ಅಭಿಯಾನ, ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಪೌಷ್ಟಿಕ ಆಹಾರ ಕೊರತೆಯಿಂದ ಗರ್ಭಿಣಿಯರಲ್ಲಿ ರಕ್ತ ಹೀನತೆ ಉಂಟಾಗುತ್ತದೆ. ಮಗುವಿನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಇದನ್ನು ತಡೆಗಟ್ಟಲು ಪೌಷ್ಟಿಕ ಆಹಾರ ಸೇವನೆ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

    ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಸುಜಾತಾ ಜವಳಗೇರಿ ಮಾತನಾಡಿ, ಸಮಾಜಕ್ಕೆ ಆರೋಗ್ಯವಂತ ಮಗುವನ್ನು ನೀಡುವ ಉದ್ದೇಶದಿಂದ ಸರ್ಕಾರ ಮಾತೃಪೂರ್ಣ ಯೋಜನೆ, ಜನನಿ ಸುರಕ್ಷಾ ಯೋಜನೆ, ಮಾತೃ ವಂದನಾ, ಯೋಜನೆಗಳನ್ನು ಜಾರಿಗೊಳಿಸಿದೆ. ಗರ್ಭಿಣಿ, ಬಾಣಂತಿಯರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

    10 ಗರ್ಭಿಣಿಯರಿಗೆ ಸಾಮೂಹಿಕವಾಗಿ ಸೀಮಂತ ಕಾರ್ಯ ನೆರವೇರಿಸಲಾಯಿತು. ಅಂಗನವಾಡಿ ಕೇಂದ್ರದ ಸಿಬ್ಬಂದಿ ಬಗೆ ಬಗೆಯ ತಿನುಸುಗಳನ್ನು ತಯಾರಿಸಿ ಗರ್ಭಿಣಿಯರಿಗೆ ಊಟ ಬಡಿಸಿದರು.

    ಆರೋಗ್ಯ ಸಂಯೋಜಕಿ ನಜ್ಮಾ ನದಾಫ್, ರಾಣಿ ಬೇಂದ್ರೆ, ಮಂಜುಳಾ ಬಜಂತ್ರಿ, ರೇಣುಕಾ ಕಟ್ಟಿಮನಿ, ಎನ್.ಎಸ್. ಹಳವಳ್ಳಿ, ಮಾಲಾ ಕುರುಂದವಾಡ, ಸುಕನ್ಯಾ ಸಣ್ಣಗೌಡ್ರ, ಸತೀಶ ಮುದಕನ್ನನವರ, ಶಿಲ್ಪಾ ಮುರಿಗೆಣ್ಣವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts