More

    ಪ್ಯಾಸೆಂಜರ್ ಆಟೋಗೆ ಸಾರಿಗೆ ಬಸ್ ಡಿಕ್ಕಿ


    ಹನೂರು: ಸಮೀಪದ ಕೆಂಚಯ್ಯನದೊಡ್ಡಿ ಗ್ರಾಮದ ಬಳಿ ಬುಧವಾರ ಸಾರಿಗೆ ಬಸ್ ಪ್ಯಾಸೆಂಜರ್ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಾಯಗೊಂಡಿದ್ದಾರೆ.

    ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಸರೋಜಮ್ಮ ಗಾಯಗೊಂಡವರು. ಅ.25 ರಂದು ಸಂಬಂಧಿಕರಾದ ಲಕ್ಷ್ಮಮ್ಮ, ನಾಗಮ್ಮ, ದೇವರಾಜಮ್ಮ ಎಂಬುವರ ಜತೆ ಸರೋಜಮ್ಮ ಪ್ಯಾಸೆಂಜರ್ ಆಟೋ ಮೂಲಕ ಮ.ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದು ಅಲ್ಲಿಯೇ ತಂಗಿದ್ದರು. ಅ.26 ರಂದು ಗ್ರಾಮಕ್ಕೆ ಹಿಂತಿರುಗುತ್ತಿದ್ದ ಬೆಳಗ್ಗೆ 5 ಗಂಟೆಯಲ್ಲಿ ಕೆಂಚಯ್ಯನದೊಡ್ಡಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ಆಟೋಗೆ ಡಿಕ್ಕಿ ಹೊಡೆದಿದೆ.

    ಗಾಯಗೊಂಡ ಸರೋಜಮ್ಮ ಅವರು ಹನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೂರು ದಾಖಲಿಸಿಕೊಂಡ ಹನೂರು ಪೊಲೀಸರು ಬಸ್ ಹಾಗೂ ಆಟೋವನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts