More

    ಪ್ರಜಾಪ್ರಭುತ್ವದಲ್ಲಿ ಮತದಾನ ಅತ್ಯದ್ಭುತ ಶಕ್ತಿ

    ಹೊಳೆನರಸೀಪುರ: ಮತದಾನ ಮಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯದ್ಭುತ ಶಕ್ತಿ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪಿ.ಆರ್.ಗೋಪಾಲ್ ಹೇಳಿದರು.

    ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ, ಸ್ವೀಪ್ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ಮಂಗಳವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಿದ್ದ ಮತದಾರರ ಕ್ಯಾಂಡಲ್ ಲೈಟ್ ಮೆರವಣಿಗೆಯಲ್ಲಿ ಮಾತನಾಡಿದರು.

    18 ವರ್ಷ ಮೇಲ್ಪಟ್ಟ ಯುವಕರು ಚುನಾವಣೆಯಲ್ಲಿ ಕಡ್ಡಾಯವಾಗಿ ಮತ ಚಲಾಯಿಸಬೇಕು. ಸಂವಿಧಾನ ಪ್ರತಿಯೊಬ್ಬರಿಗೂ ಮತ ಚಲಾಯಿಸುವ ಹಕ್ಕನ್ನು ಕೊಟ್ಟಿದೆ. ಅದನ್ನು ಯಾರೂ ಕಳೆದುಕೊಳ್ಳಬಾರದು. ಸಮಾಜ ಸೇವೆ ಮಾಡುವ ಉತ್ತಮವಾದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಮತದಾರರ ಮೇಲಿದೆ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ಮತದಾರರಿಗೆ ಸಹಾಯಕ ಚುನಾವಣಾ ಅಧಿಕಾರಿ ವಿಶ್ವನಾಥ್ ಪ್ರತಿಜ್ಞಾವಿಧಿ ಬೋಧಿಸಿದರು. ಇದಕ್ಕೂ ಮುನ್ನ ವಿವಿಧ ಇಲಾಖೆ ಅಧಿಕಾರಿಗಳು ಕ್ಯಾಂಡಲ್ ಹಚ್ಚಿ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಬಳಿಕ ತಾಲೂಕು ಅಧಿಕಾರಿಗಳು ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟು ಸುಭಾಷ್ ವೃತ್ತ, ಜಯಚಾಮರಾಜೇಂದ್ರ ವೃತ್ತ, ಕೋಟೆ ಬೀದಿ, ಮೈಸೂರು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.

    ಪುರಸಭೆ ಮುಖ್ಯಾಧಿಕಾರಿ ಮಹಿಂದ್ರಾ, ನಗರ ಠಾಣೆ ಪಿಎಸ್‌ಐ ಅರುಣ್ ಗ್ರೇಡ್ 2 ತಹಸೀಲ್ದಾರ್ ರವಿ, ಕಂದಾಯ ನಿರೀಕ್ಷಕ ಸತೀಶ್, ತಾಲೂಕು ಪಂಚಾಯಿತಿಯ ಹೊನ್ನಶೆಟ್ಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts