More

    ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಿ

    ಹನೂರು: ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್‌ಕುಮಾರ್ ತಿಳಿಸಿದರು.

    ಪಟ್ಟಣ ಪಂಚಾಯಿತಿ ವತಿಯಿಂದ ಬುಧವಾರ ಮತದಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

    ದೇಶದಲ್ಲಿ ಪ್ರಜಾಪ್ರಭುತ್ವ ಸದೃಢಗೊಳಿಸುವ ನಿಟ್ಟಿನಲ್ಲಿ ಚುನಾವಣೆ ಆಯೋಗವು ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ದಿಸೆಯಲ್ಲಿ ಪಪಂ ವತಿಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

    ಮತದಾನ ಸದೃಢ ದೇಶವನ್ನು ನಿರ್ಮಿಸುವ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಪ್ರಬಲ ಅಸ್ತ್ರ. ಆದ್ದರಿಂದ ಪ್ರತಿಯೊಂದು ಮತವೂ ನಿರ್ಣಾಯಕ ಪಾತ್ರ ವಹಿಸುತ್ತದೆ. ಹಾಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಅಲ್ಲದೇ, ಹೊಸದಾಗಿ ನೋಂದಣಿಯಾಗಿರುವ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದು ತಿಳಿಸಿದರು.

    ಬಳಿಕ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಕಚೇರಿಯ ನೌಕರರು ಪಟ್ಟಣದ ಮಲೆಮಹದೇಶ್ವರ ಬೆಟ್ಟ, ಬಂಡಳ್ಳಿ ಮುಖ್ಯ ರಸ್ತೆ ಹಾಗೂ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ ಘೋಷಣೆಗಳನ್ನು ಕೂಗುವುದರ ಮೂಲಕ ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಿದರು. ಜಾಥಾದಲ್ಲಿ ಪ್ರಭಾರ ಕಂದಾಯ ನಿರೀಕ್ಷಕ ಮಂಜುನಾಥ್, ನೌಕರರಾದ ಮಾದೇಶ್, ಮದನ್, ಪ್ರತಾಪ್, ಸುರೇಶ್, ರಾಕೇಶ್, ಶ್ರೀನಿವಾಸ್, ಶರತ್ ಹಾಗೂ ಬಿಎಲ್‌ಒಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts