More

    ಪ್ರಜಾಪ್ರಭುತ್ವ ವ್ಯವಸ್ಥೆ ರೂಪಿಸಿದ ಮಹಾತ್ಮರ ಸ್ಮರಣೆ ಮಾಡೋಣ

    ತಾಳಿಕೋಟೆ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಮಗೆ ಕೊಟ್ಟಂತಹ ಮಹಾತ್ಮರನ್ನು ನಾವು ಪ್ರತಿದಿನವೂ ಸ್ಮರಿಸಬೇಕಾಗಿದೆ ಎಂದು ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

    ತಾಲೂಕಾಡಳಿತ, ಕಂದಾಯ ಇಲಾಖೆ ವತಿಯಿಂದ ಕನ್ನಡ ಶಾಲಾ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಕೇಂದ್ರ ಸರ್ಕಾರ ಕಾಳಜಿ ವಹಿಸಿ ಅಂತಾರಾಜ್ಯ ಗಡಿ, ಜಲ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಬಸವಣ್ಣನವರನ್ನು ನಮ್ಮ ನಾಡಿನ ಸಾಂಸ್ಕೃತಿಕ ನಾಯಕನೆಂದು ಮಾಡಿರುವುದನ್ನು ನಾವು ಸ್ವಾಗತಿಸುತ್ತೇವೆ. ಶಾಸಕನಾಗಿ ನೂತನ ಈ ತಾಳಿಕೋಟೆ ತಾಲೂಕಿಗೆ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವ ಜತೆಗೆ ಕಚೇರಿಗಳನ್ನು ಸ್ಥಾಪಿಸಲು ಕಾಳಜಿ ವಹಿಸುತ್ತೇನೆ ಎಂದರು.

    ತಹಸೀಲ್ದಾರ್ ಕೀರ್ತಿ ಚಾಲಕ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ದೇಶ ಒಳ್ಳೆಯ ಸಂಸ್ಕಾರ ಪಡೆದ ದೇಶವಾಗಿದೆ. ನಾವೆಲ್ಲರೂ ಸ್ವಾಭಿಮಾನದಿಂದ ಬದುಕಲು ಕೊಡುಗೆ ನೀಡಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಎಲ್ಲರೂ ಪ್ರತಿದಿನ ಸ್ಮರಿಸುವುದು ಅವಶ್ಯ ಎಂದರು.
    ರಾಷ್ಟ್ರಗೀತೆ, ನಾಡಗೀತೆ ಗಾಯನ ನಡೆಸಿ ಧ್ವಜವಂದನೆ ಸಲ್ಲಿಸಲಾಯಿತು. ಪಿಎಸ್‌ಐ ರಾಮನಗೌಡ ಸಂಕನಾಳ ನೇತೃತ್ವದಲ್ಲಿ ಪೊಲೀಸರ ಪಥ ಸಂಚಲನ ಜರುಗಿತು.

    ಮಾಜಿ ಸೈನಿಕರು ಹಾಗೂ ಪಿಎಚ್‌ಡಿ ಪದವಿ ಪಡೆದವರನ್ನು ಸನ್ಮಾನಿಸಲಾಯಿತು. ಸಂವಿಧಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಿಗೆ ಭಹುಮಾನ ವಿತರಿಸಲಾಯಿತು. ವಿಜೇತರಿಗೆ ಬಹುಮಾನ ಕೊಡುಗೆ ನೀಡಿದ ದಾನಿಗಳು ಹಾಗೂ ಸ್ಕೌಟ್ಸ್-ಗೈಡ್ಸ್ ರಾಜ್ಯಮಟ್ಟದ ಪ್ರಶಸ್ತಿ ವಿಜೇತರು ಮತ್ತು ಕ್ರೀಡಾಕೂಟದಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

    ತಾಳಿಕೋಟೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ, ಪುರಸಭಾ ಮುಖ್ಯಾಧಿಕಾರಿ ಮೋಹನ್ ಜಾಧವ, ಮುದ್ದೇಬಿಹಾಳ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ಧ್ವಜವಂದನೆ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts