More

    ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಿ

    • ಹನೂರು: ಮತದಾನ ಪ್ರತಿಯೊಬ್ಬರ ಹಕ್ಕು. ಆದ್ದರಿಂದ ಕಡ್ಡಾಯವಾಗಿ ಮತ ಚಲಾಯಿಸುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಬೇಕು ಎಂದು ಮಾದರಿ ನೀತಿ ಸಂಹಿತೆ ನೋಡೆಲ್ ಅಧಿಕಾರಿ ಹಾಗೂ ತಾಲೂಕು ಪಂಚಾಯಿತಿ ಇಒ ಶ್ರೀನಿವಾಸ್ ತಿಳಿಸಿದರು.

    • ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಮಂಗಳವಾರ ಗ್ರಾಪಂ ಅಧಿಕಾರಿಗಳು, ನೌಕರರು ಹಾಗೂ ಸ್ವೀಪ್ ಸಮಿತಿ ವತಿಯಿಂದ ಮತದಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಆಯೋಜಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    • ಜಗತ್ತಿನಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬ ಮತದಾರನ ಮೇಲಿದೆ. ಹಾಗಾಗಿ ಪ್ರಜಾಪ್ರಭುತ್ವದ ಆಶಯವನ್ನು ಸಾಕಾರಗೊಳಿಸಲು ಚುನಾವಣೆಯು ಪ್ರಮುಖ ಅಸ್ತ್ರ. ಈ ದಿಸೆಯಲ್ಲಿ ಸಂವಿಧಾನ ನೀಡಿರುವ ಪರಮೋಚ್ಛ ಅಧಿಕಾರವನ್ನು ಬಳಸಿ ಪ್ರಜಾಪ್ರಭುತ್ವವನ್ನು ಬಲಗೊಳಿಸಬೇಕಿದೆ. ಆದ್ದರಿಂದ ಪ್ರತಿಯೊಬ್ಬರೂ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಮೇ 10 ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು. ಈ ಮೂಲಕ ಹಬ್ಬದಂತೆ ಆಚರಿಸಬೇಕು. ಈ ದಿಸೆಯಲ್ಲಿ ಗ್ರಾಪಂ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಭೇಟಿ ನೀಡಿ ಮತದಾನದ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಮತದಾನ ಪ್ರಮಾಣ ಹೆಚ್ಚಳಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು.

    • ಜಾಗೃತಿ ಜಾಥಾ:
      ಜಾಗೃತಿ ಜಾಥಾಗೆ ಚುನಾವಣಾಧಿಕಾರಿ ಮಧುಸೂದನ್ ಚಾಲನೆ ನೀಡಿದರು. ಪ್ರತಿಜ್ಞಾವಿಧಿ ಬೋಧಿಸಲಾಯಿತು. ಬಳಿಕ ಮ.ಬೆಟ್ಟದ ಮುಖ್ಯ ರಸ್ತೆ, ಬಂಡಳ್ಳಿ ರಸ್ತೆ ಹಾಗೂ ವಿವಿಧ ಬಡಾವಣೆಯಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
      ಸಹಾಯಕ ಚುನಾವಣಾಧಿಕಾರಿ ವೈ.ಕೆ ಗುರುಪ್ರಸಾದ್, ತಾಪಂ ಸಹಾಯಕ ನಿರ್ದೇಶಕ ರವೀಂದ್ರ, ಬಿಇಒ ಶಿವರಾಜು, ಪಿಡಿಒಗಳಾದ ನಂಜುಂಡಸ್ವಾಮಿ, ಮಹದೇವಸ್ವಾಮಿ, ನಾಗರಾಜಮೂರ್ತಿ, ಮಾದೇಶ್, ರಾಜು, ರಾಮು, ವೈರಮಾಣಿಕ್ಯಂ, ಗ್ರಾಪಂ ನೌಕರರು ಹಾಗೂ ಮಹಿಳಾ ಸ್ವ- ಸಹಾಯ ಸಂಘದ ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts