More

    ಪ್ರಜ್ಞಾವಂತ ಯುವಜನರೇ ದೇಶದ ಭವ್ಯ ಭವಿಷ್ಯ

    ಬೆಳಗಾವಿ: ಪ್ರತಿ ಕ್ಷೇತ್ರದಲ್ಲಿಯೂ ಗಮನಾರ್ಹ ಪಾತ್ರ ನಿರ್ವಹಿಸುತ್ತಿರುವ ಯುವಜನರು ಮನಸ್ಸು ಮಾಡಿದರೆ ದೇಶದ ಭವಿಷ್ಯವನ್ನೇ ಬದಲಾಯಿಸಬಹುದು. ಯುವಜನರೇ ದೇಶದ ಶಕ್ತಿ ಮತ್ತು ಭವಿಷ್ಯ ಎಂದು ಸಂಸದೆ ಮಂಗಲ ಅಂಗಡಿ ಹೇಳಿದರು.

    ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶನಿವಾರ, ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಟಿಯು ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ‘ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಯುವಜನರು ತಪ್ಪದೆ ಮತದಾನ ಮಾಡಬೇಕು. ಹಾಗಾದಾಗ ಪ್ರಜಾಪ್ರಭುತ್ವದಲ್ಲಿ ಅತ್ಯುತ್ತಮ ಸರ್ಕಾರ ರಚನೆಗೊಂಡು ಉತ್ತಮ ಆಡಳಿತ ನೀಡಲು ಸಾಧ್ಯ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುವಜನತೆ ಬಗ್ಗೆ ಉನ್ನತ ಕನಸು ಹಾಗೂ ಯುವ ಪ್ರತಿಭಾವಂತರ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ಕನಸು ಮತ್ತು ವಿಶ್ವಾಸಕ್ಕೆ ನೀವು ಶಕ್ತಿ ತುಂಬಿ ಸಾಕಾರಗೊಳಿಸಬೇಕು ಎಂದರು.

    ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ ಮಾತನಾಡಿ, ಚುನಾವಣೆಯಲ್ಲಿ ತಪ್ಪದೆ ಮತಚಲಾಯಿಸಬೇಕು. ‘ನಮ್ಮ ಮತ ನಮ್ಮ ಹಕ್ಕು’ ಎಂದು ತಾವೂ ಮತದಾನ ಮಾಡುವುದಲ್ಲದೆ ನೆರೆಹೊರೆ ಹಾಗೂ ಸ್ನೇಹಿತರನ್ನೂ ಮತದಾನಕ್ಕೆ ಪ್ರೇರೇಪಿಸಬೇಕು ಸಲಹೆ ನೀಡಿದರು.

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜೀನೇಶ್ವರ ಪಡನಾಡ ಮಾತನಾಡಿ, ರಾಷ್ಟ್ರಾದ್ಯಂತ ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ ಆಯೋಜಿಸಿ ಉತ್ತಮ ದೇಶ ಕಟ್ಟಲು ಯುವಜನರನ್ನು ಪ್ರೋತ್ಸಾಹಿಸಲಾಗುತ್ತಿದೆ. ಪಾಲಕರು, ಅಧ್ಯಾಪಕರ ಆಸೆಯಂತೆ ಒಳ್ಳೆಯ ವಿದ್ಯಾವಂತರಾಗಿ, ರಾಷ್ಟ್ರಭಕ್ತಿ ಬೆಳೆಸಿಕೊಂಡು ದೇಶಕ್ಕೆ ಉತ್ತಮ ಆಸ್ತಿಯಾಗಬೇಕು ಎಂದು ಹೇಳಿದರು.

    ಡಾ.ಎಸ್.ಎಂ.ಪೋರಾಪುರ ಹಾಗೂ ನಿಖಿಲೇಶ ವಿಶೇಷ ಉಪನ್ಯಾಸ ನೀಡಿದರು. ವಿಟಿಯು ಕುಲಸಚಿವ ಬಿ.ಇ.ರಂಗಸ್ವಾಮಿ, ಎನ್‌ಎಸ್‌ಎಸ್ ಅಧಿಕಾರಿ ಡಾ.ಪಿ.ಪುಟ್ಟಸ್ವಾಮಿ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಮಲ್ಲೇಶ ಚೌಗಲೆ, ಭರತ ಕಲಾಚಂದ್ರ, ಮಲ್ಲಯ್ಯ ಕರಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts