More

    ಪ್ರಜ್ವಲ್ ಕೇಸ್ ಸಿಬಿಐ ತನಿಖೆಯಾಗಲಿ, ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

    ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ಹಗರಣ, ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಗುರುವಾರ ನಗರದ ಚನ್ನಮ್ಮ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ತನಿಖೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸುಳ್ಳು ಪ್ರಕರಣ ದಾಖಲಿಸಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಹೈಕೋರ್ಟ್ ನ್ಯಾಯಾಧೀಶ ಇಲ್ಲವೇ ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

    ಪ್ರಜ್ವಲ್ ರೇವಣ್ಣ ಅವರು ಲೈಂಗಿಕ, ಪೆನ್‌ಡ್ರೈವ್ ಪ್ರಕರಣದಲ್ಲಿ ಮಹಿಳೆಯರ ಮರ್ಯಾದೆ ತೆಗೆದಿದ್ದಾರೆ. ಇದೀಗ ಸಂತ್ರಸ್ತ ಮಹಿಳೆಯರ ಸಂರಕ್ಷಣೆ ಹೆಸರಿನಲ್ಲಿ ನಾಟಕವಾಡುತ್ತಿದೆ. ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದಲೇ ಕಾಂಗ್ರೆಸ್ ಸರ್ಕಾರ ಸುಳ್ಳು ಪ್ರಕರಣಗಳಲ್ಲಿ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿದ್ದಾರೆ. ಸಿಎಂ, ಡಿಸಿಎಂ ಹಾಗೂ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಅವರ ಮಾರ್ಗದರ್ಶನದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದೆ ಎಂದು ದೂರಿದರು.

    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಮ್ಮ ಸ್ವಾರ್ಥ ಸಾಧನೆಗಾಗಿ ರಾಜಕೀಯ ವಿರೋಧಿಗಳನ್ನು ಸಿಡಿ, ಪೆನ್‌ಡ್ರೈವ್ ಮೂಲಕ ರಾಜಕಾರಣಿಗಳನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಆಗಲು ಕಾಂಗ್ರೆಸ್ ನಾಯಕರ ಸಿಡಿಗಳನ್ನು ಹೊರತರುವ ಸಾಧ್ಯತೆ ಹೆಚ್ಚಿದೆ.

    ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ಕೈವಾಡವಿತ್ತು. ಇದೀಗ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲೂ ಡಿಕೆಶಿ ಹೆಸರು ಕೇಳಿ ಬರುತ್ತಿದೆ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪಾರದರ್ಶಕ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

    ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಕಲ್ಲಪ್ಪ ಮಗೇನ್ನವರ, ನಾಸೀರ್ ಬಾಗವಾನ್, ಮಾರುತಿ ಅಷ್ಟಗಿ, ಬಿ.ಎಸ್.ರುದ್ರಗೌಡರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts