More

    ಪ್ರಣಾಳಿಕೆಯಲ್ಲಿ ವಿದ್ಯಾರ್ಥಿ, ಯುವಜನರ ಬೇಡಿಕೆ ಈಡೇರಿಸಿ

    ಶಿರಾಳಕೊಪ್ಪ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್„ಸುವ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿ, ಯುವಜನರ ಬೇಡಿಕೆಯ ವಿಚಾರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಎಸ್‍ಐಒ (ಸ್ಟೂಡೆಂಟ್ ಇಸ್ಲಾಮಿಕ್ ಆರ್ಗಾನೈಸೇಷನ್) ಶಿರಾಳಕೊಪ್ಪ ಘಟಕ ಒತ್ತಾಯಿಸಿದೆ.
    ಕರ್ನಾಟಕದ ಮೂಲ ಭಾಗಿದಾರರೊಂದಿಗೆ ಸಮಾಲೋಚನೆ ನಡೆಸಿ ವಿದ್ಯಾರ್ಥಿ ಪ್ರಣಾಳಿಕೆಯನ್ನು ಸಿದ್ಧಗೊಳಿಸಲಾಗಿದೆ. ರಾಜಕೀಯ ಪಕ್ಷಗಳು ಈ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಮೂಲ ಹಕ್ಕಾದ ಶಿಕ್ಷಣವು ಸರ್ಕಾರದ ಸ್ವಾಮ್ಯದಿಂದ ದಿನೇದಿನೆ ದುರ್ಬಲಗೊಳ್ಳುತ್ತಿದ್ದು ಅದನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಘಟಕಾಧ್ಯಕ್ಷ ಸಮೀರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಶಾಲಾ ಮಕ್ಕಳ ಅಪೌಷ್ಟಿಕÀತೆ ನಿವಾರಣೆ, ಕಲಿಕಾ ಪ್ರಕ್ರಿಯೆಯತ್ತ ಅಂಗನವಾಡಿ ವ್ಯವಸ್ಥೆಯನ್ನು ಸಶಕ್ತ ಗೊಳಿಸಬೇಕು. ಗ್ರಾಮೀಣ ಮಕ್ಕಳ, ವಲಸೆ ಹಾಗೂ ಅಸಂಘಟಿತ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಕಡ್ಡಾಯ ಶಿಕ್ಷಣ ಹಕ್ಕನ್ನು ಖಾತರಿ ಪಡಿಸಿ ಮಕ್ಕಳ ಶಾಲಾ ದಾಖಲಾತಿಯನ್ನು ಖಚಿತಪಡಿಸಬೇಕು. ಮಕ್ಕಳಿಗೆ ಸ್ಕಾಲರ್‍ಶಿಪ್, ಸಮವಸ ಯೋಜನೆಗಳನ್ನು ಸಕಾಲಕ್ಕೆ ನೀಡಬೇಕು. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಕಲಿಕಾ ವಾತಾವರಣವನ್ನು ಕಲ್ಪಿಸಬೇಕು.  ಸರ್ಕಾರಿ ಶಾಲೆಗಳಲ್ಲಿ ಶೇ.50 ಶಿಕ್ಷಕರ ಹುದ್ದೆ ಖಾಲಿ ಇದ್ದು ಶೀಘ್ರವೇ ಅವುಗಳನ್ನು ಭರ್ತಿ ಮಾಡಬೇಕು. ಕೊಠಾರಿ ಆಯೋಗದ ವರದಿಯಂತೆ ಜಿಡಿಪಿಯ ಶೇ.6 ಅನುದಾನವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ರಾಜ್ಯದ ಉನ್ನತ ಶಿಕ್ಷಣದ ವ್ಯವಸ್ಥೆಯನ್ನು ಉನ್ನತಗೊಳಿಸಬೇಕು. ಹಾಲಿ ವಿಶ್ವ ವಿದ್ಯಾಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಉಪನ್ಯಾಸಕರು, ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು. ಶಾಲಾ ಕಾಲೇಜು ಆವರಣದಲ್ಲಿ ಜಾತಿ, ಧರ್ಮದ ನಿಂದನೆ ಹಾಗೂ ತಾರತಮ್ಯ ತಡೆಯಬೇಕು. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ತ್ವರಿತವಾಗಿ ಭರ್ತಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
    ಜಿಲ್ಲಾ ಕಾರ್ಯದರ್ಶಿ ಮೊಹಮದ್ ಮನ್ಸೂರ್, ಘಟಕದ ಅಧ್ಯಕ್ಷ ಅತೀಕ್ ಉರ್ ರೆಹಮಾನ್, ಕಾರ್ಯಕತರ್Àರಾದ ಅಬ್ದುಲ್ ರೆಹಮಾನ್, ಲುಕ್ಮಾನ್, ಶಾಬಾಝ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts