More

    ಪ್ರತಿಭಾ ಕಾರಂಜಿಯಿಂದ ವ್ಯಕ್ತಿತ್ವ ವಿಕಸನ

    ಕುಶಾಲನಗರ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಬೇಕು, ಇದರಿಂದ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಹೆಬ್ಬಾಲೆ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷೆ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಎಸ್.ಬಿ. ಜ್ಯೋತಿ ಅಭಿಪ್ರಾಯಪಟ್ಟರು.


    ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ಕ್ಲಸ್ಟರ್ ಕೇಂದ್ರದ ಸಹಯೋಗದಲ್ಲಿ ಶಾಲಾ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    ಸರ್ಕಾರದ ಇಂತಹ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರೂ ಸೂಕ್ತ ರೀತಿಯಲ್ಲಿ ಬಳಸಿಕೊಂಡು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿಕೊಳ್ಳಬೇಕು. ಆಗ ಮಾತ್ರ ಸರ್ಕಾರದ ಉದ್ದೇಶ ಈಡೇರಲು ಸಾಧ್ಯ ಎಂದರು.


    ಮುಖ್ಯಶಿಕ್ಷಕ ಎಚ್.ಎಂ. ವೆಂಕಟೇಶ್ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ, ಪ್ರತಿಭೆಗೆ ಬೆಲೆ ಕಟ್ಟಲಾಗದು. ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದರು.


    ಬಿಆರ್‌ಪಿ ಲೋಕೇಶ್, ಹೆಬ್ಬಾಲೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ನಾರಾಯಣ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್, ಮುಖ್ಯ ಶಿಕ್ಷಕರಾದ ಸೂರ್ಯ ನಾರಾಯಣ್, ಕಾಮಾಕ್ಷಿ, ರಮೇಶ್, ಚಂದ್ರು, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕರುಂಬಯ್ಯ, ಸಿಆರ್‌ಪಿ ಶಾಂತಕುಮಾರ್, ಎಸ್‌ಡಿಎಂಸಿ ಸದಸ್ಯ ಅಮೃತ ಉಪಸ್ಥಿತರಿದ್ದರು.


    ಶಾಲಾ ಮಕ್ಕಳಿಂದ ಯಕ್ಷಗಾನ, ಹಾಸ್ಯ, ಮಿಮಿಕ್ರಿ ಭಾವಗೀತೆ, ಜಾನಪದ ಗೀತೆ, ಕನ್ನಡ ಭಾಷಣ, ಭರತನಾಟ್ಯ, ರಂಗೋಲಿ, ಚರ್ಚಾ ಸ್ಪರ್ಧೆ, ಡ್ರಾಯಿಂಗ್ ಹಾಗೂ ಕ್ವಿಜ್ ಕಾರ್ಯಕ್ರಮಗಳು ನಡೆದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts