More

    ಪ್ರತಿಭಾ ಕಾರಂಜಿ ಮಕ್ಕಳಿಗೆ ಉತ್ತಮ ವೇದಿಕೆ

    ಮಳವಳ್ಳಿ: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವುದರಿಂದ ಶಿಕ್ಷಣದ ಜತೆಗೆ ಬೇರೆ ಕ್ಷೇತ್ರಗಳಲ್ಲೂ ಸಾಧನೆ ಮಾಡಬಹುದು ಎಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.

    ತಾಲೂಕಿನ ಮಾರೇಹಳ್ಳಿ ಸಮೀಪದ ಆದರ್ಶ ವಿದ್ಯಾಲಯ(ಆರ್‌ಎಂಎಸ್‌ಎ)ದಲ್ಲಿ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು.

    ಸ್ಪರ್ಧೆಗಳನ್ನು ದಿಟ್ಟತನದಿಂದ ಗೆಲ್ಲುವ ಗಟ್ಟಿತನದ ಆತ್ಮಸ್ಥೈರ್ಯ ಗ್ರಾಮೀಣ ಮಕ್ಕಳಲ್ಲಿ ಇರುತ್ತದೆ. ಆದರೆ, ಮಾರ್ಗದರ್ಶನದ ಕೊರತೆಯಿಂದ ಬಹಳಷ್ಟು ಪ್ರತಿಭಾವಂತರು ಇದರಿಂದ ವಂಚಿತರಾಗುತ್ತಿದ್ದರು. ಹೀಗಾಗಿಯೇ, ಸರ್ಕಾರ ಸುಪ್ತ ಪ್ರತಿಭೆ ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಮೂಲಕ ಸಾಧಕರನ್ನಾಗಿಸಲು ಪ್ರತಿಭಾ ಕಾರಂಜಿ ಜಾರಿಗೆ ತಂದಿದೆ ಎಂದರು.

    ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಕಾಂತಾರ ಚಿತ್ರದ ಪೆಂಜುರ್ಲಿ ವೇಷಧಾರಿ ಎಲ್ಲರ ಗಮನ ಸೆಳೆಯಿತು.

    ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಯಪ್ರಕಾಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಗುರುಸ್ವಾಮಿ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಶ್ರೀನಿವಾಸ್ ಇತರರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts