ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Adarsha Shakshaka Prashasti Application
Published on

ಚಾಮರಾಜನಗರ: ಯಳಂದೂರಿನ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 2024-25ನೇ ಸಾಲಿನಲ್ಲಿ ಶೇ.85ಕ್ಕಿಂತಲೂ ಹೆಚ್ಚು ಅಂಕ ಗಳಿಸಿರುವ ಸಮುದಾಯದ ವಿದ್ಯಾರ್ಥಿಗಳು ಮತ್ತು ಸಂಘದ ಸದಸ್ಯರ ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ವಿದ್ಯಾಭ್ಯಾಸ ಮಾಡಿದ ಶಾಲೆ-ಕಾಲೇಜು ಹೆಸರು, ಅಂಕಪಟ್ಟಿ ನಕಲು ಪ್ರತಿ, ಜಾತಿ ಪ್ರಮಾಣ ಪತ್ರ ವಿವರ ಒಳಗೊಂಡ ಮಾಹಿತಿಯನ್ನು ಅರ್ಜಿಯಲ್ಲಿ ಭರ್ತಿ ಮಾಡಿ ಜೂ.30ರೊಳಗೆ ಸಂಘದ ಕಚೇರಿಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಘದ ಅಧ್ಯಕ್ಷ ಅಂಬಳೆ ಬಿ.ನಂಜುಂಡಸ್ವಾಮಿ(ಗಿರೀಶ್)(ಮೊ:7090872795), ಕಾರ್ಯದರ್ಶಿ ಕೆಸ್ತೂರು ಮಲ್ಲಣ್ಣ (6363815406) ಸಂಪರ್ಕಿಸುವಂತೆ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net