More

    ಪ್ರತಿಭೆ ಅನಾವರಣಕ್ಕೆ ಕಲೋತ್ಸವ ವೇದಿಕೆ

    ಬೇಲೂರು: ಮಕ್ಕಳಲ್ಲಿರುವ ಚೈತನ್ಯದಾಯಕ ಪ್ರತಿಭೆಗಳನ್ನು ಹೊರ ಹೊಮ್ಮಿಸಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆ ಮಾಡಲು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಸಲಹೆ ನೀಡಿದರು.


    ಪಟ್ಟಣ ಸಮೀಪದ ಯುನೈಟೆಡ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಕಸಬಾ ಬಿ ವಲಯ ಮಟ್ಟದ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಈಗ ಕೋವಿಡ್ ಆತಂಕ ದೂರವಾದ ಹಿನ್ನೆಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಪ್ರತಿಭಾ ಕಾರಂಜಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಮೂಲಕ ಮಕ್ಕಳಿಗೆ ಬೌದ್ಧಿಕ, ಮಾನಸಿಕ ಬೆಳವಣಿಗೆಗೆ ನೆರವಾಗಲಿದೆ ಎಂದು ಹೇಳಿದರು.


    ಯುನೈಟೆಡ್ ಅಕಾಡೆಮಿ ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ಎಸ್.ಸುರೇಶ್, ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿದರು. ವೇಷಭೂಷಣ, ಮರಗಾಲು ಕುಣಿತ, ದೇವರ, ಚಾಮನ ಕುಣಿತ ಸೇರಿದಂತೆ ಹಲವು ಜಾನಪದ ಕಲೆಗಳನ್ನು ಪ್ರದರ್ಶಿಸಿದರು. ಶಿಕ್ಷಣ ಇಲಾಖೆ ಸಂಯೋಜಕ ಮಂಜುನಾಥ್, ಶಿಕ್ಷಕರಾದ ಶಿವಪ್ಪ, ಲಾವಣ್ಯ, ರುಕ್ಮಿಣಿ, ವಿಜಯ್, ಸರಸ್ವತಿ, ಯುನೈಟೆಡ್ ಅಕಾಡೆಮಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಲೋಕೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts