More

    ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ

    ಹಾಸನ : ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಹಾಗೂ ನೆರವಿನ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ತಿಳಿಸಿದರು.

    ಹೊಳೆನರಸೀಪುರ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಏರ್ಪಡಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ಪರಿಶಿಷ್ಟ ಜಾತಿ, ಪಂಗಡದ ಅಂಗವಿಕಲ ಮಕ್ಕಳು ಮಹಿಳೆಯರು ಆರ್ಥಿಕವಾಗಿ ಹಿಂದುಳಿದವರು ಕಾನೂನಿನ ನೆರವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

    ಕಾನೂನಿನ ನೆರವಿನಿಂದ ಯಾರೂ ವಂಚಿತರಾಗಬಾರದು ಎಂಬುದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶವಾಗಿದೆ. ಕಾನೂನಿನ ಬಗ್ಗೆ ತಿಳಿವಳಿಕೆ ಇಲ್ಲದವರು ತಾಲೂಕು ಕಾನೂನು ಸೇವೆಗಳ ಸಮಿತಿಯ ಗಮನಕ್ಕೆ ತಂದು ನೆರವನ್ನು ಪಡೆಯಬಹುದು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಸಿದ್ದರಾಮ, ಪ್ರವೀಣ ಕಾಲೇಜಿನ ಪ್ರಾಂಶುಪಾಲ ದೇವರಾಜು , ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ವಿ.ಸುರೇಶ್‌ಕುಮಾರ್, ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಚಂದ್ರಶೇಖರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts