More

    ಪ್ರತಿಯೊಬ್ಬರಿಗೂ ಡೆಂಘೆ ರೋಗದ ಅರಿವಿರಲಿ

    ಎಚ್.ಡಿ.ಕೋಟೆ: ಡೆಂಘೆ ಒಂದು ಮಾರಣಾಂತಿಕ ಕಾಯಿಲೆ. ಈ ರೋಗವನ್ನು ರಕ್ತ ಪರೀಕ್ಷೆ ಮಾಡಿಸುವುದರ ಮೂಲಕ ಕಂಡುಹಿಡಿಯಬಹುದು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಚಿದಂಬರ್ ತಿಳಿಸಿದರು.


    ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಸಹಯೋಗದೊಂದಿಗೆ ಡೆಂೆ ರೋಗದ ಬಗ್ಗೆ ಆಯೋಜಿಸಿದ್ದ ಚಿತ್ರಕಲೆ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.


    ಡೆಂೆಗೆ ಸೂಕ್ತ ಚಿಕಿತ್ಸೆ ಇಲ್ಲ. ಆದ್ದರಿಂದ ಪ್ರತಿಯೊಬ್ಬರೂ ಡೆಂೆ ರೋಗದ ಬಗ್ಗೆ ಅರಿವು ಹೊಂದಬೇಕು. ಯಾವುದೇ ವ್ಯಕ್ತಿ ಜ್ವರ ಕಾಣಿಸಿಕೊಂಡ ತಕ್ಷಣ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು. ಮನೆಯಲ್ಲಿ ಇರುವ ನೀರಿನ ತೊಟ್ಟಿ, ಡ್ರಮ್ ಬ್ಯಾರೆಲ್ಗಳು, ಏರ್ ಕೂಲರ್, ಫ್ರಿಡ್ಜ್‌ಗಳನ್ನೂ ವಾರಕ್ಕೆ ಎರಡು ಬಾರಿ ಸ್ವಚ್ಛ ಮಾಡಿಕೊಳ್ಳಬೇಕು. ಸೊಳ್ಳೆ ಪರದೆಗಳನ್ನು ಉಪಯೋಗಿಸಿ ಡೆಂೆ ರೋಗದಿಂದ ದೂರ ಉಳಿಯಿರಿ. ಎಂದು ತಿಳಿಸಿದರು.

    ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಉದಯ್ ಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸೋಮಣ್ಣ, ಮಂಜುನಾಥ್, ನಾಗೇಂದ್ರ,ರವಿರಾಜ್ ಸರಳಾ,ಚಂದ್ರು, ಹನುಮಂತ, ಅಶೋಕ್, ರಾಮಚಂದ್ರ, ಕೃಷ್ಣ, ಅರ್ಚನಾ, ಪ್ರತಾಪ್, ಸಮುದಾಯ ಆರೋಗ್ಯ ಅಧಿಕಾರಿಗಳು, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts