More

    ಪ್ರತಿಯೊಬ್ಬರೂ ಕಾನೂನಿನ ಮಹತ್ವ ಅರಿತಿರಲಿ

    ಸಾಗರ: ದೇಶದ ಪ್ರತಿಯೊಬ್ಬ ಪ್ರಜೆಯೂ ಕಾನೂನನ್ನು ಗೌರವಿಸಬೇಕು ಮತ್ತು ಕಾನೂನಿನ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಹೆಚ್ಚುವರಿ ನ್ಯಾಯಾಧೀಶೆ ಸ್ಪರ್ಶ ಎಂ.ಡಿಸೋಜ ಹೇಳಿದರು.
    ಮಹಿಳಾ ದಿನಾಚರಣೆ ಅಂಗವಾಗಿ ಸಂತ ಜೋಸೆಫ್ ಪ್ರೌಢಶಾಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಬಿಇಒ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.
    ಭಾರತದ ಸಂವಿಧಾನಕ್ಕೆ ವಿಶೇಷ ಮಾನ್ಯತೆ ಇದೆ. ಸಂವಿಧಾನ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಕಾನೂನು ಜೀವ ಜಗತ್ತಿಗೆ ಪೂರಕವಾಗಿದೆ. ಮನುಕುಲದ ಏಳಿಗೆಗಾಗಿ ರಚಿತವಾಗಿರುವ ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ ವಿಶೇಷವಾದ ಕಾನೂನುಗಳಿದ್ದು ಅವುಗಳನ್ನು ಪ್ರತಿಯೊಬ್ಬರೂ ಅರಿತು ಅಳವಡಿಸಿಕೊಳ್ಳಬೇಕು. ಶಾಲಾ-ಕಾಲೇಜು ಹಂತದಲ್ಲಿ ಮಕ್ಕಳಿಗೆ ಕಾನೂನಿನ ಅರಿವು ಮೂಡಿಸುವಂತಾಗಬೇಕು. ಇದರಿಂದ ಕಾನೂನಿನಲ್ಲಿರುವ ಮಹತ್ವದ ವಿಚಾರಗಳನ್ನು ತಿಳಿದುಕೊಂಡಂತಾಗುತ್ತದೆ ಮತ್ತು ಸಮಸ್ಯೆಗಳು ಉಂಟಾದಾಗ ಕಾನೂನಿನ ಮರೆ ಹೋದರೆ ರಕ್ಷಣೆ ಹೇಗೆ ದೊರೆಯುತ್ತದೆ ಎಂಬ ಬಗ್ಗೆ ಅರಿವು ಮೂಡುತ್ತದೆ ಎಂದರು.
    ವಿಶೇಷ ಉಪನ್ಯಾಸ ನೀಡಿದ ನ್ಯಾಯವಾದಿ ಶರಾವತಿ ಗೌಡ, ಕಾನೂನು ಗೌರವಿಸುವ ಕಡೆ ಶಾಂತಿ ಮತ್ತು ಸೌಹಾರ್ದತೆ ನೆಲೆಯೂರಿರುತ್ತದೆ. ಮಕ್ಕಳಿಗೆ ಶಿಕ್ಷಣದ ಜತೆಗೆ ಪ್ರಾಥಮಿಕ ಕಾನೂನಿನ ಅರಿವು ಮೂಡಿಸುವ ಅಗತ್ಯ ಇದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆಯನ್ನು ನಿಲ್ಲಿಸುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕ್ರಮ ಅಗತ್ಯವಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts