More

    ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡಿ

    ಯಳಂದೂರು: ಮೇ 10ರಂದು ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಆರ್.ಉಮೇಶ್ ಸಲಹೆ ನೀಡಿದರು.


    ಪಟ್ಟಣದ ತಾಲೂಕು ಕಚೇರಿ ಮುಂಭಾಗ ಮೇ 10 ಪ್ರಜಾಪ್ರಭುತ್ವದ ಹಬ್ಬದ ಹಿನ್ನೆಯಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆ’ ಮತದಾನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.


    ಪ್ರತಿಯೊಬ್ಬ ಪ್ರಜೆಯೂ ಮತದಾನ ಮಾಡುವುದರಿಂದ ಪ್ರಜಾಪ್ರಭುತ್ವವನ್ನು ಬಲಗೊಳಿಸಬಹುದು. ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷವಾಕ್ಯದಂತೆ ಪ್ರತಿಯೊಬ್ಬರೂ ತಪ್ಪದೆ ಮತಚಾಯಿಸಬೇಕು ಎಂದು ತಿಳಿಸಿದರು.
    ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿ ಬಸ್ ನಿಲ್ದಾಣದ ಬಳಿ ಪ್ರತಿಜ್ಞಾವಿಧಿ ಬೋಧಿಸಿ ನಂತರದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಮತಗಟ್ಟೆ ಕೇಂದ್ರದಲ್ಲಿ ಪ್ರಜಾಪ್ರಭುತ್ವ ಹಬ್ಬದ ಧ್ವಜಾರೋಹಣ ನೆರವೇರಿಸಲಾಯಿತು.


    ತಹಸೀಲ್ದಾರ್ ಯಮುನಪ್ಪ ತಳವಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರವಿಕೀರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜು, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಮಲ್ಲಿಕಾರ್ಜುನ್, ಸಿಡಿಪಿಒ ತಿಬ್ಬಯ್ಯ, ಪಂಚಾಯತ್ ರಾಜ್ ಎಇಇ ನಿಂಗರಾಜು, ಸಿದ್ದರಾಜು, ತಾಪಂ ಸಹಾಯಕ ನಿರ್ದೇಶಕ ಎಂ.ಗಂಗಾಧರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಮೃತೇಶ್ವರ್, ಅಂಗನವಾಡಿ ಕಾರ್ಯಕರ್ತೆಯರು, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts