More

    ಪ್ರತಿ ಕುಟುಂಬದವರ ಆರೋಗ್ಯದ ಮಾಹಿತಿ ಸಂಗ್ರಹಿಸಿ

    ಶಿಡ್ಲಘಟ್ಟ: ಪ್ರತಿ ದಿನ ಮನೆ ಮನೆಗೆ ಆಶಾ ಕಾರ್ಯಕರ್ತೆಯರು ಭೇಟಿ ನೀಡಿ, ಪ್ರತಿ ಕುಟುಂಬದವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದ್ದಾರೆ.

    ಚಿಕ್ಕಬಳ್ಳಾಪುರ ನಗರದ ವಿವಿಧೆಡೆ ಮತ್ತು ಶಿಡ್ಲಘಟ್ಟ ತಾಲೂಕಿನ ಮೇಲೂರಿಗೆ ಮಂಗಳವಾರ ಭೇಟಿ ನೀಡಿ, ಕರೊನಾ ನಿರ್ವಹಣೆ ಬಗ್ಗೆ ಪರಿಶೀಲಿಸಿ. ಸಾರ್ವಜನಿಕರೊಂದಿಗೆ ಚರ್ಚಿಸುವುದರ ಜತೆಗೆ ನಿಯಮ ಪಾಲನೆಗೆ ಸಲಹೆ ನೀಡಿದರು.

    ಆಶಾ ಕಾರ್ಯಕರ್ತೆಯರು 60 ವರ್ಷ ಮೇಲ್ಪಟ್ಟ ಹಿರಿಯರ ದಿನ ನಿತ್ಯದ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಕೊಳ್ಳಬೇಕು. ಆಯಾ ವ್ಯಾಪ್ತಿಯಲ್ಲಿ ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು. ಕರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಪರಸ್ಪರ ಅಂತರ ಕಾಪಾಡಿಕೊಳ್ಳಬೇಕು. ಇದರ ಮೂಲಕ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

    ನಿಯಮ ಉಲ್ಲಂಸುವವರಿಗೆ ದಂಡ: ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣ ಮತ್ತು ನಿರಂತರ ಧಾರಾಕಾರ ಮಳೆಯ ನಡುವೆ ಕರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯು ಮುಂಜಾಗ್ರತಾ ಕ್ರಮಗಳ ಪಾಲನೆ ನಿಗಾ ಮತ್ತಷ್ಟು ಕಟ್ಟುನಿಟ್ಟುಗೊಳಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಆಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಖಾಕಿ ಪಡೆ ಕರೊನಾ ಜಾಗೃತಿ ಲಕ ಅಳವಡಿಕೆ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಇದರ ಜತೆಗೆ ಸ್ಥಳೀಯ ಆಡಳಿತ ಸಂಸ್ಥೆಯ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ವಿವಿಧೆಡೆ ಜನರು ಮುಂಜಾಗ್ರತಾ ಕ್ರಮಗಳ ಪಾಲನೆಯ ಬಗ್ಗೆ ಸಲಹೆ ನೀಡುತ್ತಿದ್ದಾರೆ. ಮತ್ತೊಂದೆಡೆ ನಿಯಮ ಉಲ್ಲಂಸುವವರಿಗೆ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸಲಾಗುತ್ತಿದೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಜಿ.ಪಂ.ಉಪ ಕಾರ್ಯದರ್ಶಿ ನೋಮೇಶ್ ಕುಮಾರ್, ತಹಸೀಲ್ದಾರ್ ಅರುಂಧತಿ, ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶಮೂರ್ತಿ ಮತ್ತಿತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts