More

    ಪ್ರತಿ ಜಿಲ್ಲೆಯಲ್ಲಿ ಕೈಗಾರಿಕಾ ಅದಾಲತ್

    ಹುಬ್ಬಳ್ಳಿ: ಕೈಗಾರಿಕೆಗಳಿಗೆ ಸಂಬಂಧಿಸಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ಪರಿಹರಿಸುವುದಕ್ಕಾಗಿ ಆಗಸ್ಟ್ ಅಥವಾ ಸೆಪ್ಟೆಂಬರ್​ನಿಂದ ಪ್ರತಿ ಜಿಲ್ಲೆಯಲ್ಲಿ ಕೈಗಾರಿಕಾ ಅದಾಲತ್ ಆಯೋಜಿಸಲು ನಿರ್ಧರಿಸಿದ್ದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.

    ಇಲ್ಲಿಯ ಗಾಮನಗಟ್ಟಿ ಕೈಗಾರಿಕಾ ವಸಹಾತುವಿನಲ್ಲಿ ಮಂಗಳವಾರ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೆಲ ಜಿಲ್ಲೆಗಳಲ್ಲಿ ಕೆಐಎಡಿಬಿ ಹಾಗೂ ಕೆಎಸ್​ಎಸ್​ಐಡಿಸಿ ಸೇರಿ ಹಲವು ಕೈಗಾರಿಕಾ ಪ್ರದೇಶಗಳ ವ್ಯಾಜ್ಯಗಳು ನ್ಯಾಯಾಲಯಗಳಲ್ಲಿವೆ. ಇವುಗಳಲ್ಲಿ ಬಹುಪಾಲು ವ್ಯಾಜ್ಯಗಳನ್ನು ಸುಲಭವಾಗಿ ಇತ್ಯರ್ಥಗೊಳಿಸಬಹುದು ಎಂದರು.

    ಗಾಮನಗಟ್ಟಿ ವಸಾಹತು ಪ್ರದೇಶದಲ್ಲಿ ಕೆಐಎಡಿಬಿ ವತಿಯಿಂದ ನಿರ್ವಿುಸಿರುವ ವಸತಿ ಸಮುಚ್ಚಯಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಇವುಗಳ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ಶಾಸಕ ಅರವಿಂದ ಬೆಲ್ಲದ, ಜಿಲ್ಲಾ ಕೈಗಾರಿಕೆ ಕೇಂದ್ರ ಜಂಟಿ ನಿರ್ದೇಶಕ ಮೋಹನ ಬರಮಕ್ಕನವರ ಇತರರಿದ್ದರು.

    7ರ ನಂತರ ಲಾಕ್​ಡೌನ್ ತೀರ್ಮಾನ: ಕರೊನಾ ವೈರಸ್ ನಿಯಂತ್ರಣಕ್ಕಾಗಿ ಸಂಪೂರ್ಣ ಲಾಕ್​ಡೌನ್ ಮಾಡುವ ಯೋಚನೆ ಸರ್ಕಾರಕ್ಕೆ ಇಲ್ಲ. ಜು. 7ರ ನಂತರದ ಪರಿಸ್ಥಿತಿ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರೊನಾ ಸೋಂಕು ಪಾಸಿಟಿವ್ ಬಂದ ವ್ಯಕ್ತಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಪ್ರಾರಂಭವಾಗಲಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆಗಳ ಪ್ರಮುಖರೊಂದಿಗೆ ಈಗಾಗಲೇ ಸಭೆ ನಡೆಸಲಾಗಿದೆ ಎಂದರು. ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಯ ಶೇ. 50ರಷ್ಟು ಬೆಡ್ ಮೀಸಲಿಡುವಂತೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳ 6 ಸಾವಿರಕ್ಕೂ ಹೆಚ್ಚು ಬೆಡ್ ಸೋಂಕಿತರ ಚಿಕಿತ್ಸೆಗೆ ಬಳಕೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಚೀನಾ ಆಪ್​ಗಳ ಬಹಿಷ್ಕರಿಸುವ ಕೇಂದ್ರ ಸರ್ಕಾರದ ನಿರ್ಧಾರ ಸೂಕ್ತವಾದದ್ದು. ಈ ನಿರ್ಧಾರದಿಂದ ಸ್ಟಾರ್ಟ್ ಅಪ್ ಕಂಪನಿಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಪರ್ಯಾಯ ಆಪ್​ಗಳ ರಚನೆ ಈಗಾಗಲೇ ಪ್ರಾರಂಭಗೊಂಡಿದೆ ಎಂದು ತಿಳಿಸಿದರು.

    ಆರು ತಿಂಗಳಲ್ಲಿ ವರ್ತಲ ರಸ್ತೆಗೆ ಚಾಲನೆ: ನಗರದ ಹೊರವಲಯದ ಗಬ್ಬೂರ ಕ್ರಾಸ್ ಬಳಿ ಅರ್ಧ ವರ್ತಲ ರಸ್ತೆ ಕಾಮಗಾರಿ ವೀಕ್ಷಿಸಿದ ಸಚಿವ ಜಗದೀಶ ಶೆಟ್ಟರ್, ಕಾಮಗಾರಿ ಪ್ರಗತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಸುದ್ದಿಗಾರರಿಗೆ ವಿವರ ನೀಡಿ, 6 ತಿಂಗಳಲ್ಲಿ ಈ ವರ್ತಲ ರಸ್ತೆ ಕಾಮಗಾರಿ ಪೂರ್ಣಗೊಂಡು ವಾಹನ ಸಂಚಾರ ಪ್ರಾರಂಭಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಜಯಪುರ ರಸ್ತೆಯಿಂದ ಧಾರವಾಡಕ್ಕೆ ವರ್ತಲ ರಸ್ತೆ ಕಾಮಗಾರಿ ಕೈಗೊಳ್ಳುವ ಚಿಂತನೆಯೂ ಇದೆ ಎಂದು ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 15 ಕಿ.ಮೀ. ವರ್ತಲ ರಸ್ತೆಯಲ್ಲಿ 12.5 ಕಿ.ಮೀ. ರಸ್ತೆಯನ್ನು ಈಗಾಗಲೇ ನಿರ್ವಿುಸಿದೆ. ಗಬ್ಬೂರು ಬಳಿಯ ಸೇತುವೆ ನಿಮಾಣ ಕಾಮಗಾರಿ ಬಾಕಿ ಇದ್ದು, ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು. ಹುಬ್ಬಳ್ಳಿ -ಧಾರವಾಡ ಮಧ್ಯದ 6 ಪಥಗಳ ರಾಷ್ಟ್ರೀಯ ಹೆದ್ದಾರಿ ನಿಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ನೂಲ್ವಿ ಕ್ರಾಸ್ ಬಳಿ ಮೇಲು ಸೇತುವೆ ನಿರ್ವಿುಸುವಂತೆ ನೂಲ್ವಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದು, ಕೇಂದ್ರ ಸರ್ಕಾರಕ್ಕೆ ಹೆದ್ದಾರಿ ಪ್ರಾಧಿಕಾರದ ಮೂಲಕ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜೆ.ಎಚ್. ಎಲಿಗಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts